– ಏರ್‌ಪೋರ್ಟ್ ಸಮೀಪದ ಹೋಟೆಲ್‍ಗಳಲ್ಲಿ ಕ್ವಾರೆಂಟೈನ್ ಕೇಂದ್ರ
– ಕರ್ನಾಟಕ ಬಂದ್ ವಿಸ್ತರಣೆ
ಬೆಂಗಳೂರು: ವೈರಸ್‍ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕರ ಜೊತೆ ವೈದ್ಯಕೀಯ ಶಿಕ್ಷಣ ಸಚಿವರು ಇಂದು ಸಭೆ ನಡೆಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಿಕ್ಕಿರುವ ಮಾಹಿತಿ ಪ್ರಕಾರ ವಿದೇಶದಿಂದ ಬಂದಿರುವ ಓರ್ವ ವಿದ್ಯಾರ್ಥಿನಿ ಹಾಗೂ ಅವರನ್ನು ಕರೆದುಕೊಂಡ ಬಂದ ವೈದ್ಯರೊಬ್ಬರಿಗೆ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಭೆ ನಡೆಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕಲಬುರಗಿ ವೈದ್ಯರಿಗೆ ಕೊರೊನಾ- ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ
ಕರ್ನಾಟಕ ಬಂದ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ವೈಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಅಷ್ಟೇ ಅಲ್ಲದೆ ಸೋಂಕಿತರಿಗೆ ನಿಖರ ಚಿಕಿತ್ಸೆ, ಔಷಧಿ ಇಲ್ಲದೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಬಂದ್ ವಿಸ್ತರಣೆ ಮಾಡವುದು ಅಗತ್ಯವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೊರೊನಾ ಎಫೆಕ್ಟ್- ಹಾಸ್ಟೆಲ್, ಪಿಜಿಗಳನ್ನು ಖಾಲಿ ಮಾಡಿ
ರಾಜ್ಯದಲ್ಲಿಯೇ ಬೆಂಗಳೂರಿಗೆ ವಿದೇಶಗಳಿಂದ ಹೆಚ್ಚು ಜನರು ಬರುತ್ತಾರೆ. ಹೀಗಾಗಿ ವಿಮಾನ ನಿಲ್ದಾಣ ಸಮೀಪದ ಹೋಟೆಲ್‍ಗಳಲ್ಲಿ ಕ್ವಾರೆಂಟೈನ್ ಸೆಂಟರ್ ಸ್ಥಾಪಿಸಿ, ಅಲ್ಲಿ ಅವರನ್ನು ಇರಿಸಿ ನಿಗಾ ಇಡಲಾಗುತ್ತದೆ. ಈ ಬಗ್ಗೆ ಚರ್ಚೆ ನಡೆದಿದೆ. ಈಗಾಗಲೇ ಹಿರಿಯ ನಾಯಕರು ದೆಹಲಿಯಿಂದ ಫೋನ್ ಮಾಡಿ ಸಲಹೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ಅವರು ಒಪ್ಪಿದರೆ ಕ್ವಾರೆಂಟೈನ್ ಸೆಂಟರ್ ತೆರೆಯಲಾಗುತ್ತದೆ. ವಿಕ್ಟೋರಿಯಾ ಆಸ್ಪತ್ರೆಯಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ಹೋಗಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಒಂದು ಕೋಟಿಗೂ ಅಧಿಕ ಜನರು ವಾಸಿಸುತ್ತಾರೆ. ಹಾಗಾಗಿ ಸಹಜವಾಗಿಯೇ ಬೆಂಗಳೂರು ಮಹಾನಗರ ಪಾಲಿಕೆ ನಮಗೆ ದೊಡ್ಡ ಸಮಸ್ಯೆ ಹಾಗೂ ಸವಾಲಾಗಿ ಪರಿಣಮಿಸಿದೆ. ಕಲಬುರಗಿಯಲ್ಲಿ ಓರ್ವರಿಂದ ಅನೇಕರಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಈಗಾಗಲೇ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದನ್ನು ನಿಗ್ರಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗದಗದಲ್ಲಿ ಮೂರುವರೆ ವರ್ಷದ ಕಂದಮ್ಮನಿಗೆ ಕೊರೊನಾ ಸೋಂಕಿರುವ ಶಂಕೆ