ಬೆಂಗಳೂರು: ಸತ್ಯಕ್ಕೆ ಎರಡು ಮುಖಗಳಿರುತ್ತವೆ. ಈಗ ಕಾಂಗ್ರೆಸ್ ಕಾರ್ಯಕರ್ತರೇ ಅವರ ನಾಯಕರ ಮೇಲೆ ಮುಗಿ ಬಿದ್ದಿದ್ದಾರೆ. ಕೈ ಪಕ್ಷದ ನಾಯಕರು ಸಮಾಜದಲ್ಲಿ ಹೇಗೆ ಇರಬೇಕು ಅನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹುಸಂಖ್ಯಾತರ ಬಗ್ಗೆ ಕಾಂಗ್ರೆಸ್ ನಾಯಕರು ಲಘುವಾಗಿ ಮಾತನಾಡಿರುವುದು ಕಾರ್ಯಕರ್ತರಿಗೆ ಕೋಪ ತರಿಸಿದೆ. ಭಾವೋದ್ವೇಗಕ್ಕೆ ಒಳಗಾಗಿ ಮೊಟ್ಟೆ ಎಸೆದಿದ್ದು ಖಂಡನಾರ್ಹ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಈ ಕೃತ್ಯ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಈಗಲಾದರೂ ಸಮಾಜದಲ್ಲಿ ಹೇಗೆ ನಡೆದುಕೊಳ್ಳಬೇಕು ಅನ್ನುವುದನ್ನು ಕಲಿತುಕೊಳ್ಳಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್ 8ಕ್ಕೆ ಬಿಜೆಪಿ ಜನೋತ್ಸವ ಕಾರ್ಯಕ್ರಮ: ಸುಧಾಕರ್
Advertisement
Advertisement
ವಿಪಕ್ಷ ನಾಯಕ ಕಾರಿಗೆ ಮೊಟ್ಟೆ ಎಸೆದವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಂಡಿದೆ. ಅದನ್ನು ಅಲ್ಲೇ ಬಿಡಬೇಕು. ಆದರೆ ಅದೇ ರಾಜಕಾರಣವನ್ನು ಮುಂದಕ್ಕೆ ತೆಗೆದುಕೊಂಡು ಹೋಗುವುದು ಶೋಭೆ ತರುವುದಿಲ್ಲ. ಕಾಂಗ್ರೆಸ್ ಕಾರ್ಯಕರ್ತನೆ ಈ ಕೆಲಸ ಮಾಡಿರುವುದರಿಂದ ಸಿದ್ದರಾಮಯ್ಯ ಹೇಳಿಕೆ ಏನಿರುತ್ತೆ ಅನ್ನುವ ಕುತೂಹಲವಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಜಾದ್ ಬೆನ್ನಲ್ಲೇ ಕಾಂಗ್ರೆಸ್‌ನ ಮಹತ್ವದ ಹುದ್ದೆಗೆ ಆನಂದ್ ಶರ್ಮಾ ರಾಜೀನಾಮೆ