ಬೆಂಗಳೂರು: ರಾಜ್ಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.
Advertisement
ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್‍ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ
Advertisement
ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.
ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ.
— Dr Sudhakar K (@mla_sudhakar) June 2, 2022
Advertisement
ಕೆಲದಿನಗಳ ಹಿಂದೆ ಸುಧಾಕರ್ ಕುಟುಂಬದ ಜೊತೆ ವಿದೇಶ ಪ್ರವಾಸ ಮುಗಿಸಿ ವಾಪಸ್ ಆಗಿದ್ದರು. 10ಕ್ಕೂ ಹೆಚ್ಚು ದಿನಗಳ ಕಾಲ ವಿದೇಶಿ ಪ್ರವಾಸದಲ್ಲಿದ್ದ ಸಚಿವರಿಗೆ ವಿದೇಶದಿಂದಲೇ ಸೋಂಕು ಹಬ್ಬಿರುವ ಅನುಮಾನ ಕಾಡುತ್ತಿದೆ. ಕೆಲ ರಾಷ್ಟ್ರಗಳಲ್ಲಿ ಮಂಕಿಪಾಕ್ಸ್ ಭೀತಿ ಇದ್ದು, ಇನ್ನೂ ಕೆಲ ರಾಷ್ಟ್ರಗಳಲ್ಲಿ ಕೋವಿಡ್ ಕೇಸ್ ಹೆಚ್ಚಿದೆ. ಇಷ್ಟೆಲ್ಲಾ ಆತಂಕದ ಮಧ್ಯೆ ಸುಧಾಕರ್ ವಿದೇಶ ಪ್ರವಾಸ ಹೋಗಿ ಬಂದಿರುವುದರಿಂದ ಈ ಅನುಮಾನ ಎದ್ದಿದೆ. ಇದನ್ನೂ ಓದಿ: ಬೆಂಗ್ಳೂರಿಗೆ ಬಂದಿದ್ದ ಕೇರಳದ 12 ವರ್ಷದ ಹುಡುಗಿ ಹಂದಿ ಜ್ವರಕ್ಕೆ ಬಲಿ – ರಾಜಧಾನಿಗೆ ಆತಂಕ
Advertisement