ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಡವರಿಗೆ ಸ್ವಾಭಿಮಾನದಿಂದ ಜೀವನ ನಡೆಸಲು ಮತ್ತು ತಮ್ಮದೇ ಆದ ಮನೆ ನಿರ್ಮಿಸಿಕೊಳ್ಳುವ ಕನಸನ್ನು ನನಸು ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಸುಮಾರು 834 ಎಕರೆ ಸರ್ಕಾರಿ ಜಮೀನು ಗುರುತಿಸಿ ನಿವೇಶನಗಳನ್ನಾಗಿ ಹಂಚಲು ಮೀಸಲಿಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Advertisement
ಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿಯೊಬ್ಬ ವಸತಿ ರಹಿತ ಬಡವರಿಗೆ ಮನೆ ನಿರ್ಮಿಸಿಕೊಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಆರ್.ಲತಾ ಅವರು ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಮತ್ತು ರಾಜಸ್ವ ನಿರೀಕ್ಷಕರನ್ನು ಬೆನ್ನತ್ತಿ ಸರ್ಕಾರದ ಜಾಗವನ್ನು ಗುರುತಿಸಿ ಅದನ್ನು ನಿವೇಶನಗಳನ್ನಾಗಿ ವಿಂಗಡಿಸಲು ಕ್ರಮ ಕೈಗೊಂಡು ಸುಮಾರು 834 ಎಕರೆ ಜಮೀನು ಮಂಜೂರು ಮಾಡಲಾಗಿದೆ. ನಿವೇಶನ ಹಂಚಿಕೆ ಕಾರ್ಯ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ. ಮುಂದಿನ ಒಂದು ವರ್ಷದ ಒಳಗೆ ಜಿಲ್ಲೆಯ 38 ಸಾವಿರ ಕುಟುಂಬಗಳಿಗೆ ವಸತಿ ಭಾಗ್ಯ ಯೋಜನೆಗೆ ಪ್ರಥಮ ಆದ್ಯತೆ ಕಲ್ಪಿಸಲಾಗುತ್ತದೆ ಎಂದರು. ಇದನ್ನೂ ಓದಿ: ನಾಳೆ ಪುನೀತ್ 11ನೇ ದಿನದ ಪುಣ್ಯಾರಾಧನೆ – ಅಪ್ಪು ಕುಟುಂಬಸ್ಥರಿಂದ ಭಾರೀ ಸಿದ್ಧತೆ
Advertisement
Advertisement
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ 750 ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿಗಳನ್ನಾಗಿ ಆಯ್ಕೆ ಮಾಡಿದ್ದಾರೆ. ಅದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪುರ ಗ್ರಾಮ ಪಂಚಾಯಿತಿ ಸಹಿತ 18 ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿಗಳನ್ನಾಗಿ ಗುರುತಿಸಿ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
Advertisement
ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ನೀವೇಶನ, ಪಿಂಚಣಿ, ಸಾಗುವಳಿ, ಪಿಎಂ ಕಿಸಾನ್, ಭಾಗ್ಯಲಕ್ಷ್ಮೀ ಬಾಂಡ್, ಮಂಜೂರಾತಿ ಪತ್ರಗಳು ಸೇರಿದಂತೆ ಒಟ್ಟು 2,916 ಫಲಾನುಭವಿಗಳಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ವಿತರಿಸಲಾಯಿತು. ಅದೇ ರೀತಿಯ ಸುಮಾರು 700 ಜನರಿಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ವಿಮೆ ಸೌಲಭ್ಯವನ್ನು ಸಹ ಕಲ್ಪಿಸಿ ಕಾರ್ಡ್‍ಗಳ್ನು ವಿತರಿಸಿದ ಸಚಿವರು ಜಿಲ್ಲಾಡಳಿತದ ಕ್ರಿಯಾಶೀಲ ಕಾರ್ಯವೈಖರಿಗೆ ಶ್ಲಾಘನೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ
ವಿವಿಧ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ ಮಾಡಿದ ವಿವರ:
* 700 ಫಲಾನುಭವಿಗಳಿಗೆ ಎ.ಬಿ.ಆರ್.ಕೆ ಕಾರ್ಡ್ ವಿತರಣೆ.
* ಆರೋಗ್ಯ ತಪಾಸಣೆ ಶಿಬಿರ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
* ಕೋವಿಡ್-19 ಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
* ಪಿ.ಸಿ.ವಿ ವ್ಯಾಕ್ಸಿನ್ ಲಾಂಚ್ ಮಾಡಲಾಯಿತು.
* 10 ಮಕ್ಕಳಿಗೆ ಉಚಿತ ಕನ್ನಡಕ ವಿತರಿಸಲಾಯಿತು.
* ಆರ್.ಕೆ.ವೈ ಐ.ಎಫ್.ಎಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ 4 ರೈತರಿಗೆ ಕಾರ್ಯಾದೇಶ ವಿತರಣೆ.
* 122 ಫಲಾನುಭವಿಗಳಿಗೆ ಪಿಎಂ ಕಿಸಾನ್ ಮಂಜೂರಾತಿ ಆದೇಶ ವಿತರಣೆ.
* 10 ಫಲಾನುಭವಿಗಳಿಗೆ ಕೃಷಿ ಉಪಕರಣಗಳ ವಿತರಣೆ.
* 178 ಫಲಾಭವಿಗಳಿಗೆ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿಯಲ್ಲಿ ವಿತರಣೆ.
* 212 ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ.
* 1 ಅಪೌಷ್ಟಿಕ ಮಗುವಿಗೆ ಕಿಟ್ ವಿತರಣೆ.
* ರೇಷ್ಮೆ ಇಲಾಖೆಯಿಂದ ವಿವಿಧ ಯೋಜನೆಯಡಿಯಲ್ಲಿ 40 ಕಾರ್ಯಾದೇಶ ವಿತರಣೆ.
* 6 ಅಂತರ್ ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹ ಧನ ವಿತರಣೆ.
* ಸ್ಮಶಾನಕ್ಕೆ ರಸ್ತೆ ಕಾಮಗಾರಿಗೆ ಚಾಲನೆ.
* ವಸತಿ ನಿವೇಶನಕ್ಕೆ ಹೋಗುವ ರಸ್ತೆ ಕಾಮಗಾರಿಗೆ ಚಾಲನೆ.
* 44 ಫಲಾನುಭವಿಗಳಿಗೆ ಸಾಗುವಳಿ ಚೀಟಿ ವಿತರಣೆ.
* 122 ಫಲಾನುಭವಿಗಳಿಗೆ ಪೌವತಿ ಖಾತೆ, ಆರ್.ಟಿ.ಸಿ ಹಾಗೂ ಮ್ಯುಟೇಶನ್ ವಿತರಣೆ.
* ಸಾಮಾಜಿಕ ಭದ್ರತೆ ಯೋಜನೆಯಡಿಯಲ್ಲಿ ಮಂಜೂರು ಮಾಡಿದ ಒಟ್ಟು ಮಸಾಶನಗಳ ಸಂಖ್ಯೆ – 122.
* ಅಂತ್ಯ ಸಂಸ್ಕಾರ ಯೋಜನೆಯ ಫಲಾನುಭವಿಗಳ ಸಂಖ್ಯೆ- 62.
* ರಾಷ್ಟ್ರೀಯ ಕುಟುಂಬ ಯೋಜನೆಯಡಿಯಲ್ಲಿ ಮಂಜೂರು ಮಾಡಿದ ಸಂಖ್ಯೆ-15.
* ವಿವಿಧ ಇಲಾಖೆಗಳಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ, ಕಾರ್ಯಕ್ರಮದಡಿ ಸೌಲಭ್ಯ ಪಡೆಯುವ ಒಟ್ಟು ಫಲಾನುಭವಿಗಳ ಸಂಖ್ಯೆ-2916.
ಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಲವಾರು ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸೇರಿದಂತೆ ಹಲವಾರು ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಇಲಾಖೆಗಳು ಮಾಹಿತಿ ಕೇಂದ್ರಗಳನ್ನು ಮತ್ತು ಮಳಿಗೆಗಳನ್ನು ತೆರೆದು ಸರ್ಕಾರಿ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿದರು. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ
ಜಿಲ್ಲಾಧಿಕಾರಿ ಲತಾ ಅವರು ಕಾರ್ಯಕ್ರಮದ ಪ್ರಸ್ತಾವಿಕ ಭಾಷಣ ಮಾಡಿ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಿದರು. ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಇರಾಕ್ ಪ್ರಧಾನಿ ನಿವಾಸದ ಮೇಲೆ ಡ್ರೋನ್ ದಾಳಿ!
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಅರಣ್ಯಾಧಿಕಾರಿ ಅರಸಲನ್, ಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ವಿರುಪಾಕ್ಷಗೌಡ, ಉಪಾಧ್ಯಕ್ಷರಾದ ಮಾಲಾಶ್ರೀ, ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯರಾದ ಟಿ.ಎನ್. ಜಗನ್ನಾಥ್, ಕೆ.ಎಂ.ಎಫ್ ನಿರ್ದೇಶಕರಾದ ಸುಬ್ಬಾರೆಡ್ಡಿ, ಗೌರಿಬಿದನೂರು ತಾಲೂಕಿನ ತಹಶೀಲ್ದಾರ್ ಶ್ರೀನಿವಾಸ, ಕಂದಾಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರುಗಳು, ಜನಪ್ರತಿನಿಧಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.