ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದ ಸ್ಥಿತಿ ತುಂಬಾ ಗಂಭೀರವಾಗಿದೆ. ನಾವು ನೀಡುತ್ತಿರುವ ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಗೊತ್ತಿಲ್ಲ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ ಎಂದು ಡಾ. ಪರಮೇಶ್ ಮಾಹಿತಿ ನೀಡಿದ್ದಾರೆ.
ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ ಅವರು ಇದ್ದಾರೆ. ಹೀಗಾಗಿ ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ಕೊಡುತ್ತಲೇ ಇದ್ದೇವೆ. ಸದ್ಯ ಬೇರೆ ವೈದ್ಯರು ಬಂದಿಲ್ಲ ಎಂದು ತಿಳಿಸಿದರು.
Advertisement
Advertisement
ಶ್ರೀಗಳ ದೇಹದಲ್ಲಿ ಪ್ರೊಟೀನ್ ಅಂಶ ಬಹಳ ಕಡಿಮೆ ಆಗಿದೆ. ಒಟ್ಟಿನಲ್ಲಿ ಶ್ರೀಗಳನ್ನು ಗಂಭೀರ ಸ್ಥಿತಿಯಿಂದ ಹೊರತರುವಲ್ಲಿ ನಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ರು.
Advertisement
ಭಕ್ತರು ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದ ಕೋಣೆಯ ಕಿಟಿಕಿಯ ಮೂಲಕ ದರ್ಶನ ಪಡೆದು ಹೋಗುತ್ತಿದ್ದರು. ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಶ್ರೀಗಳಿಗೆ ರಕ್ತದ ಒತ್ತಡ ಮತ್ತು ಉಸಿರಾಟದಲ್ಲಿ ಕೊಂಚ ಏರುಪೇರು ಕಂಡು ಬಂದಿದ್ದು, ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಶ್ರೀಗಳಿಗೆ ನಿಶ್ಯಕ್ತಿ ತುಂಬಾ ಕಡಿಮೆ ಇದ್ದು, ಕಳೆದ ದಿನ ಆಯುರ್ವೇದಿಕ್ ಚಿಕಿತ್ಸೆ ನೀಡಲಾಗಿದೆ. ಈಗ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಮಠಕ್ಕೆ ನಿಯೋಜನೆ ಮಾಡಲಾಗಿದೆ.
Advertisement
ಕೆಲ ದಿನಗಳ ಹಿಂದೆ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶ್ರೀಗಳ ಪಾದ ಸ್ಪರ್ಶಿಸಿ ನಮಸ್ಕರಿಸಿದ ವೇಳೆ ಕಣ್ಣು ತೆರೆದು ಮುಗುಳ್ನಕ್ಕಿದ್ದರು. ಕಿರಿಯ ಶ್ರೀಗಳ ಸಹಾಯದೊಂದಿಗೆ ಇಷ್ಟಲಿಂಗ ಪೂಜೆಯಲ್ಲಿ ನಡೆದಾಡುವ ದೇವರು ಭಾಗಿಯಾಗಿ, ಅವರ ಪಕ್ಕದಲ್ಲೇ ಕುಳಿತು ಕಿರಿಯ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv