ಬೆಂಗಳೂರು: ನೆನ್ನೆಯಷ್ಟೇ ಮೈಸೂರು ವಿಶ್ವವಿದ್ಯಾನಿಲಯವು ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ (ಮರಣೋತ್ತರ) ನೀಡಿ ಗೌರವಿಸಲಾಗಿತ್ತು. ಈ ಬೆನ್ನಲ್ಲೇ ಇಂದು ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರು ಪನೀತ್ ರಾಜ್‍ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಡಾ.ಪುನೀತ್ ರಾಜ್‍ಕುಮಾರ್ ಅವರಿಗೆ `ಸಹಕಾರ ರತ್ನ’ (ಮರಣೋತ್ತರ) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Advertisement
ಪ್ರಶಸ್ತಿಯು 15 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದ್ದು, ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ
Advertisement
ಈಚೆಗಷ್ಟೇ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಕೊಟ್ಟ ಬೆನ್ನಲ್ಲೇ, ಸರಕಾರದ ಮತ್ತೊಂದು ಪ್ರಶಸ್ತಿ ಘೋಷಣೆಯಾಗಿತ್ತು. ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ಸಹಕಾರ ರತ್ನ ಪ್ರಶಸ್ತಿಯನ್ನು ಪುನೀತ್ ಅವರಿಗೆ ಘೋಷಿಸಲಾಗಿತ್ತು. ನಂದಿನಿ ಹಾಲು ಉತ್ಪನ್ನಗಳಿಗೆ ಉಚಿತವಾಗಿ ಜಾಹೀರಾತು ನೀಡಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ಘೋಷಿಸಲಾಗಿತ್ತು.
Advertisement
Advertisement
ಮಾರ್ಚ್ 20ರಂದು ಕಂಗೇರಿ ಉಪನಗರದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 60 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದರು. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಪ್ರಶಸ್ತಿ ಘೋಷಿಸಿದ್ದರಿಂದ ಇಂದು ಅವರ ನಿವಾಸದಲ್ಲೇ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಇಡೀ ಥಿಯೇಟರ್ ನಲ್ಲಿ ಒಬ್ಬರೇ ಕೂತು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಡೈಮಂಡ್ ರವಿ