ದುಬೈನಲ್ಲಿ ನಡೆಯಿತು ಡಾ.ರಾಜ್ ಕಪ್ ಟೀಮ್ ಹರಾಜು ಪ್ರಕ್ರಿಯೆ

Public TV
2 Min Read
Dr.Raj cup 2

ನ್ನಡ ಚಿತ್ರರಂಗದ ನಟರು ಒಟ್ಟಾಗಿ ಆಡುವ ಡಾ.ರಾಜ್ ಕಪ್ ಕ್ರಿಕೆಟ್ (Cricket) ಪಂದ್ಯಾವಳಿ ಸೀಸನ್ 6ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಸ್ಮರಣಾರ್ಥವಾಗಿ ಈ ಬಾರಿ ರಾಜ್ ಕಪ್ ( (Dr. Raj Cup)) ಆಯೋಜಿಸಲಾಗಿದ್ದು, ನಿನ್ನೆ ಜೂನ್ 17 ರಂದು ದುಬೈನಲ್ಲಿ (Dubai) ಟೀಮ್ ಹರಾಜು (Auction) ಪ್ರಕ್ರಿಯೆ ನಡೆಯಿತು. ಈ ಹರಾಜು ಪ್ರಕ್ರಿಯೆಯಲ್ಲಿ ಸ್ಯಾಂಡಲ್ ವುಡ್ ಅನೇಕ ತಾರೆಯರು ಭಾಗಿಯಾಗಿದ್ದರು.

Dr.Raj cup 1

ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ ಪನ್ನಗಾಭರಣ, ಚೇತನ್ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದನ್ನೂ ಓದಿ:ರಶ್ಮಿಕಾ ಮಾತ್ರವಲ್ಲ, ಪೂಜಾಗೂ ಠಕ್ಕರ್ ಕೊಡ್ತಿದ್ದಾರೆ ‘ಭರಾಟೆ’ ಬ್ಯೂಟಿ ಶ್ರೀಲೀಲಾ

Dr. Rajkumar 2

ಪಂದ್ಯಾವಳಿಯ ಉದ್ಘಾಟನೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneet Rajkumar) ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಮೊನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ, ಆಯೋಜಕರಾದ ರಾಜೇಶ್ ಬ್ರಹ್ಮಾವರ, ಅನಿರುದ್ದ, ಮಣಿಕಾಂತ್ ಕದ್ರಿ, ಸಿಂಪಲ್ ಸುನಿ, ರವಿಶಂಕರ್ ಗೌಡ, ಜೇಮ್ಸ್ ಚೇತನ್, ಪವನ್ ಒಡೆಯರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.

Raj cup 3

ರಾಜ್ ಕಪ್ ಆಯೋಜಕರಾದ ರಾಜೇಶ್ ಬ್ರಹ್ಮಾವರ (Rajesh Brahmavar) ಮಾತನಾಡಿ, ಕಳೆದ ಬಾರಿ 8 ತಂಡ ಇತ್ತು. ಈ ಬಾರಿ 12 ತಂಡಗಳಾಗಿವೆ.  1000ಕ್ಕೂ ಹೆಚ್ಚು ಅಪ್ಲೀಕೇಷನ್ ಬಂದಿತ್ತು. ಅವುಗಳಲ್ಲಿ ರೂಲ್ಸ್ ಗೆ ತಕ್ಕಂತೆ ಆಯ್ಕೆ ಮಾಡಲಾಗಿದೆ. 12 ತಂಡಗಳಿಗೆ 12 ಕ್ಯಾಪ್ಟನ್, 12 ವೈಸ್ ಕ್ಯಾಪ್ಟನ್, ಸ್ಟಾರ್ ಕ್ಯಾಪ್ಟನ್ ಇರಲಿದ್ದಾರೆ. ರಾಜ್ ಕಪ್ ಸೀಸನ್ 6ನ್ನು ಆರು ದೇಶಗಳಲ್ಲಿ ಮಾಡುವ ಪ್ಲಾನ್ ನಡೆದಿದೆ. ಶ್ರೀಲಂಕಾ, ಸಿಂಗಾಪುರ, ಮಲೇಷ್ಯಾ, ಬ್ಯಾಂಕಾಕ್ ಮತ್ತು ದುಬೈನಲ್ಲಿ ಪಂದ್ಯ ನಡೆಯಲಿವೆ. ಇನ್ನೊಂದು ದೇಶ ಬಾಕಿ ಉಳಿದಿದೆ.

Raj cup 4

ನಟ ಅನಿರುದ್ದ (Aniruddha) ಮಾತನಾಡಿ, ಡಾ.ರಾಜ್ ಕಪ್ ಹೆಸರಲ್ಲೇ ಸಕಾರಾತ್ಮಕತೆ ಇದೆ. ಆ ಒಂದು ವ್ಯಕ್ತಿಗೆ ಮಹಾನ್ ಕಲಾವಿದರಿಗೆ ಅವ್ರ ಹೆಸರಲ್ಲಿ ಅವರ ಸ್ಮರಣಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ಆಡುತ್ತಿರುವುದು ನಿಜಕ್ಕೂ ಸಂತೋಷ. ಅದರಲ್ಲಿ ನಾನು ಭಾಗಿಯಾಗಿದ್ದು, ರಾಜೇಶ್ ಅವಕಾಶ ಕಲ್ಪಿಸಿಕೊಟ್ಟಿದ್ದು, ನನಗೆ ವೈಯಕ್ತಿಕವಾಗಿ ಬಹಳ ಸಂತೋಷವಾಗಿದೆ. ರಾಜೇಶ್ ನನಗೆ ಆತ್ಮೀಯರು. ನನ್ನ ಮೊದಲ ಸಿನಿಮಾದಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ. ಕ್ರಿಕೆಟ್ ಅನ್ನೋದು ನಿಮಿತ್ತ ಅಷ್ಟೇ. ನಮ್ಮ ಕನ್ನಡ ಚಿತ್ರರಂಗದ ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಬಾಂಧವ್ಯ ಇದೆ ಅನ್ನೋದನ್ನು ತೋರಿಸಿಕೊಡುತ್ತದೆ. ಈ ಪಂದ್ಯಾವಳಿ ಯಶಸ್ವಿಯಾಗಲಿ ಎಂದರು.

 

ಡಾ. ರಾಜ್ ಕಪ್ ಸೀಸನ್ 6 ನಲ್ಲಿ ಒಟ್ಟು 12 ತಂಡಗಳು ಭಾಗಿಯಾಗಲಿದ್ದು, 27 ಮ್ಯಾಚ್ ಗಳು ನಡೆಯಲಿದೆ.  ಡಾಲಿ ಧನಂಜಯ್, ಅನಿರುದ್ದ, ಡಾರ್ಲಿಂಗ್ ಕೃಷ್ಣ , ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ಪ್ರಜ್ವಲ್, ಕೋಮಲ್, ಶ್ರೀನಗರ ಕಿಟ್ಟಿ, ರಾಜುಗೌಡ ನೇತೃತ್ವದ ತಂಡಗಳು ಪಾಲ್ಗೊಳ್ಳಲಿವೆ. ಇನ್ನು, ರಾಜ್ ಕಪ್ ಸೀಸನ್ 6ರ ಲೀಗ್ ಮ್ಯಾಚ್ ಗಳು ವಿದೇಶದಲ್ಲಿ ನಡೆಯಲಿದೆ. ಈ ಬಾರಿ ಲೀಗ್ ಪಂದ್ಯಗಳು ಶ್ರೀಲಂಕಾ, ಸಿಂಗಾಪುರ, ಮಲೇಷ್ಯಾ ಬ್ಯಾಂಕಾಕ್ ಮತ್ತು ದುಬೈನಲ್ಲಿ ನಡೆಯಲಿವೆ. ಈ ಮಹತ್ವದ ರಾಜ್ ಕಪ್ ಟೂರ್ನಿಗಾಗಿ ಸ್ಯಾಂಡಲ್ ವುಡ್ ತಾರೆಯರು, ತಂತ್ರಜ್ಞರ, ರಾಜಕೀಯ, ಮಾಧ್ಯಮದವರು ಭಾಗಿಯಾಗಲಿದ್ದಾರೆ.

Share This Article