ಡಾ.ರಾಜ್ ಕುಮಾರ್ (Rajkumar) ಅವರ ಹುಟ್ಟು ಹಬ್ಬ. ಇಂದಿನ ಅವರ 95ನೇ ವರ್ಷದ ಹುಟ್ಟುಹಬ್ಬವನ್ನು (Birthday) ಅರ್ಥಪೂರ್ಣವಾಗಿಸಲು ನಾನಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ ಅವರ ಅಭಿಮಾನಿಗಳು. ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕಂಠೀರವ ಸ್ಟುಡಿಯೋಗೆ ಇಂದು (ಏ.24) ಬೆಳಿಗ್ಗೆ 10 ಗಂಟೆಗೆ ಕುಟುಂಬಸ್ಥರು ಆಗಮಿಸಲಿದ್ದಾರೆ. ಅಪಾರ ಸಂಖ್ಯೆಯಲ್ಲಿ ಅಭಿಮಾಗಳು ಸೇರಲಿದ್ದಾರೆ.
Advertisement
ಪ್ರತಿ ವರ್ಷದಂತೆ ಈ ಸಲವೂ ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಈ ಎಲ್ಲ ಕೆಲಸಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲೇ ಶುರುವಾಗಲಿವೆ. ಇದನ್ನೂ ಓದಿ:ನಟಿ ರಮ್ಯಾ ‘ಜಪಾನ್’ ಅಂತ ಕರೆಯೋದು ಯಾರನ್ನ?
Advertisement
Advertisement
ಇವುಗಳ ಜೊತೆಗೆ ರಾಜ್ಯಾದ್ಯಂತ ಡಾ.ರಾಜ್ ಅಭಿಮಾನಿಗಳು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಅನ್ನ ಸಂತರ್ಪನೆ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿದ್ದಾರೆ. ಡಾ.ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ (Puneeth Rajkumar) ಹೆಸರಿನಲ್ಲಿ ಸಂಗೀತ ಸಂಜೆ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯಲಿವೆ.
Advertisement
ಇಂದು (ಏ.24) ಬೆಳಗ್ಗೆ ಡಾ.ರಾಜ್ ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿರುವ ಸ್ಮಾರಕಕ್ಕೆ ಆಗಮಿಸಿ, ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಮತ್ತು ಡಾ.ರಾಜ್ ಕುಮಾರ್ ಹೆಣ್ಣು ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಕುಟುಂಸ್ಥರು ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.