CinemaDistrictsKarnatakaLatestLeading NewsMain PostSandalwood

ಡಾ.ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ಭರ್ಜರಿ ಸಿದ್ಧತೆ : ನಾಳೆ ಏನೆಲ್ಲ ವಿಶೇಷ?

ನಾಳೆ (ಏ.24) ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬ. ಈ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಲು ನಾನಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ ಸ್ಯಾಂಡಲ್ ವುಡ್. ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅಲ್ಲದೇ, ಕರ್ನಾಟಕ ಸರಕಾರ 2017ನೇ ಸಾಲಿ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಬೆಳಗ್ಗೆಯಿಂದಲೇ ಈ ಎಲ್ಲ ಕೆಲಸಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲೇ ಶುರುವಾಗಲಿವೆ. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

ಅಲ್ಲದೇ, ಡಾ.ರಾಜ್ ಮೊಮ್ಮಗ ಯುವ ರಾಜ್ ಕುಮಾರ್, ಮೊಮ್ಮಗಳಾದ ಧನ್ಯಾ ರಾಮ್ ಕುಮಾರ್ ಮತ್ತು ಹಿರಿಯ ಪುತ್ರ ಶಿವರಾಜ್ ಕುಮಾರ್ ಅವರ ಹೊಸ ಸಿನಿಮಾಗಳ ಘೋಷಣೆ, ಫಸ್ಟ್ ಲುಕ್ ರಿಲೀಸ್ ಮತ್ತು ಪೋಸ್ಟರ್ ಬಿಡುಗಡೆಯನ್ನು ಆಯಾ ಸಿನಿಮಾದ ನಿರ್ಮಾಪಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

ಹೊಂಬಾಳೆ ಫಿಲ್ಮಸ್‍ ಬ್ಯಾನರ್ ನಲ್ಲಿ ಯುವರಾಜ್ ಕುಮಾರ್ ಸಿನಿಮಾಗಳನ್ನು ಮಾಡುತ್ತಿದ್ದು, ನಾಳೆ ಈ ಕುರಿತು ಅಧಿಕೃತ ಮಾಹಿತಿ ಹೊರ ಬೀಳಲದೆ. ಅಲ್ಲದೇ, ವಿಕ್ಕಿ ವರುಣ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ಧನ್ಯ ರಾಮ್ ಕುಮಾರ್ ನಟಿಸುತ್ತಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಲಿದೆ. ಶ್ರೀನಿ ನಿರ್ದೇಶನದಲ್ಲಿ ಶಿವರಾಜ್ ಕುಮಾರ್ ಅವರು ನಟಿಸುತ್ತಿದ್ದು, ಈ ಸಿನಿಮಾದ ಕಾನ್ಸೆಪ್ಟ್ ಪೋಸ್ಟರ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿದೆ.

ಇವುಗಳ ಜೊತೆಗೆ ರಾಜ್ಯಾದ್ಯಂತ ಡಾ.ರಾಜ್ ಅಭಿಮಾನಿಗಳು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಅನ್ನ ಸಂತರ್ಪನೆ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿದ್ದಾರೆ. ಡಾ.ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಸಂಗೀತ ಸಂಜೆ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯುತ್ತಿವೆ.

Leave a Reply

Your email address will not be published.

Back to top button