-ಡಾ. ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕಾಗಿ ಆಗ್ರಹ
ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿಯನ್ನ ಜಾರಿಗೆ ತರುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ 45ನೇ ಕಾಲಿಟ್ಟಿದೆ.
ರಾಜ್ಯ ಸರ್ಕಾರ ಕೂಡಲೇ ಡಾ. ಮಹಿಷಿ ವರದಿಯನ್ನ ಅನುಷ್ಠಾನಕ್ಕೆ ತರಬೇಕು ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟ ಧರಣಿ ಸತ್ಯಾಗ್ರಹವನ್ನ ಮಾಡುತ್ತಿದ್ದು ಧರಣಿ 44 ದಿನಗಳು ಮುಗಿದಿದೆ. ಇವತ್ತು 45 ನೇ ದಿನಕ್ಕೆ ಕಾಲಿಟ್ಟಿದೆ.
Advertisement
Advertisement
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಅನ್ನೋದನ್ನ ಡಾ. ಮಹಿಷಿ ವರದಿಯಲ್ಲಿ ಉಲ್ಲೇಖವಾಗಿದ್ದು, ಕನ್ನಡಿಗರಿಗೆ ಉದ್ಯೋಗಾವಕಾಶ ಸಿಗಲು ಈ ವರದಿಯನ್ನ ಸರ್ಕಾರ ಅನುಮೋದಿಸಬೇಕು ಎಂದು ಕನ್ನಡ ಪರ ಸಂಘಟನೆಗಳು ಕಳೆದ ಒಂದೂವರೆ ತಿಂಗಳಿಂದ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಧರಣಿ ಕುಳಿತಿದ್ದಾರೆ. ವಿಧಾನಸೌಧಕ್ಕೂ ಮುತ್ತಿಗೆ ಹಾಕೋ ಪ್ರಯತ್ನ ಮಾಡಿರೋ ಪ್ರತಿಭಟನಾಕಾರು ಸರ್ಕಾರದ ಯಾವುದೇ ಭರವಸೆಗಳಿಗೆ ಬಗ್ಗದೇ ವರದಿ ಅನುಷ್ಠಾನಕ್ಕೆ ಬರೋವರೆಗೆ ನಮ್ಮ ಧರಣಿ ಕೈಬಿಡೋದಿಲ್ಲ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ.