ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಡಾ.ಸಿದ್ದರಾಮಯ್ಯರನ್ನು ಅಂತಿಮ ಮಾಡಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿ ಲಭ್ಯವಾಗಿವೆ.
ಇಂದು ನಗರದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಕೇವಲ ನಾಲ್ಕು ತಿಂಗಳ ಅಧಿಕಾರಕ್ಕೆ ಹಲವು ನಾಯಕರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆಗೆ ಸ್ಫರ್ಧಿಸಲು ನಿರಾಸಕ್ತಿ ತೋರಿಸಿದ್ದರು. ಕೊನೆ ಗಳಿಗೆಯಲ್ಲಿ ಬಿಜೆಪಿ ಮಾಜಿ ಶಾಸಕ ದೊಡ್ಡಬೋರೇಗೌಡ ಅವರ ಪುತ್ರ ನಿವೃತ್ತ ಹೆಚ್ಚುವರಿ ವಾಣಿಜ್ಯ ತೆರಿಗೆ ಅಧಿಕಾರಿ ಡಾ. ಸಿದ್ದರಾಮಯ್ಯ ಅವರನ್ನು ಅಂತಿಮ ಮಾಡಿದೆ. ದೊಡ್ಡಬೋರೇಗೌಡರು ಈ ಹಿಂದೆ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
Advertisement
Advertisement
ಸಿದ್ದರಾಮಯ್ಯನವರು ಹೆಚ್ಚುವರಿ ವಾಣಿಜ್ಯ ತೆರಿಗೆ ಅಧಿಕಾರಿಯಾಗಿ ಮತ್ತು ಕೆಇಆರ್ ಸಿಯ ಕಾರ್ಯದರ್ಶಿಯೂ ಆಗಿ ಜುಲೈನಲ್ಲಿ ನಿವೃತ್ತಿ ಹೊಂದಿದ್ದಾರೆ. ಇಂದು ಪಕ್ಷ ಸೇರ್ಪಡೆಗೊಂಡ ಸಿದ್ದರಾಮಯ್ಯನವರು ಮಂಡ್ಯ ಕ್ಷೇತ್ರಕ್ಕೆ ಧುಮುಕಿದ್ದಾರೆ. ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿಗೆ ಅಭ್ಯರ್ಥಿಗಾಗಿ ಹುಡುಕಾಟದಲ್ಲಿತ್ತು. ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ನಾಯಕ ಮಂಡ್ಯ ಉಪ ಚುನಾವಣೆ ಕಣಕ್ಕೆ ಇಳಿಯಲಿದ್ದಾರೆ. ಇದೂವರೆಗೂ ಜೆಡಿಎಸ್ ತನ್ನ ಪಕ್ಷದಿಂದ ಯಾರನ್ನು ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿಲ್ಲ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv