ಮಂಡ್ಯ: ಬಿಜೆಪಿಯಿಂದ ಸ್ಪರ್ಧಿಸಲು ದಿವಂಗತ ಅಂಬರೀಶ್ ಪತ್ನಿ ಸುಮಲತಾಗೆ ಹುಚ್ಚಿದ್ಯಾ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮಾಧ್ಯಮಗಳ ಜೊತೆ ಡಾ.ಸಿದ್ದರಾಮಯ್ಯ ಮಾತನಾಡಿ, ಆರ್.ಅಶೋಕ್ ಸುಮಲತಾ ಅವರನ್ನು ಪರೋಕ್ಷವಾಗಿ ಬಿಜೆಪಿಗೆ ಆಹ್ವಾನಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮುಂದಿನ ಲೋಕಸಭಾ ಸಾರ್ವತ್ರಿಕ ಚುನಾವಣೆಗೂ ನಾನೇ ಬಿಜೆಪಿ ಅಭ್ಯರ್ಥಿ. ಅಂಬರೀಶ್ ಹಾಗೂ ಸುಮಲತಾ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡವರು. ಅವರಿಗೆ ಬಿಜೆಪಿಯಿಂದ ಸ್ಪರ್ಧೆ ಮಾಡುವ ಅವಶ್ಯಕತೆ ಇಲ್ಲ. ಅಧಿಕಾರದಲ್ಲಿರುವ ಸಮ್ಮಿಶ್ರ ಸರ್ಕಾರದ ವತಿಯಿಂದ ಸ್ಪರ್ಧೆ ಮಾಡುವುದನ್ನು ಬಿಟ್ಟು ವಿರೋಧ ಪಕ್ಷವಾದ ಬಿಜೆಪಿಯಿಂದ ಕಣಕ್ಕಿಳಿಯಲು ಅವರಿಗೇನಾದರೂ ಹುಚ್ಚು ಇದ್ಯಾ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ:ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ: ಕೆ.ಟಿ.ಶ್ರೀಕಂಠೇಗೌಡ
Advertisement
Advertisement
ನನಗೆ ನಮ್ಮ ಪಕ್ಷದ ವರಿಷ್ಠರು ಸೂಚನೆ ನೀಡಿದಕ್ಕೆ ಮಂಡ್ಯ ಜಿಲ್ಲಾದ್ಯಂತ ಕಾರ್ಯಕರ್ತರ ಸಭೆ ನಡೆಸುತ್ತಿದ್ದೇನೆ. ಚುನಾವಣೆ ಮುಗಿದ ಮೇಲೆ ಜನರ ಸೇವೆ ಮಾಡುತ್ತೇನೆ ಎಂದಿದ್ದೆ. ಆ ಪ್ರಕಾರವಾಗಿ ಜನರ ಮಧ್ಯೆ ಇದ್ದೇನೆ. ನವೆಂಬರ್ 15ರಿಂದ ಹಿಡಿದು ಇಲ್ಲಿಯವರೆಗೂ ನನ್ನ ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತಿದ್ದೇನೆ. ಮಂಡ್ಯ ಜಿಲ್ಲೆಯಲ್ಲಿ ವಿರೋಧವಿರುವ ಪಕ್ಷವೆಂದರೆ ಅದು ಬಿಜೆಪಿ. ಈಗಾಗಲೇ ವರಿಷ್ಠರು ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದರಿಂದ ನಾನು ಚುನಾವಣಾ ಅಭ್ಯರ್ಥಿಯ ರೀತಿಯೇ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv