ತುಮಕೂರು: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಡೆದಾಡುವ ದೇವರು ಮಠ ತಲುಪಿದ್ದು, ಇದುವರೆಗೂ ಯಾರಿಗೂ ದರ್ಶನ ಭಾಗ್ಯ ಕೊಟ್ಟಿಲ್ಲ. ಆದರೆ ಈಗ ವಿಡಿಯೋ ಕಾನ್ಪರೆನ್ಸ್ ಮೂಲಕ ಶ್ರೀಗಳು ಮಾತನಾಡಿದ್ದಾರೆ.
ಸದ್ಯಕ್ಕೆ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡಿದೆ. ಹಳೆಯ ವಿದ್ಯಾರ್ಥಿ ಸಂಘದಿಂದ ನಡೆದ ಸಭೆಯಲ್ಲಿ ತುಮಕೂರಿನ ಸಿದ್ದಗಂಗಾ ಶ್ರೀಗಳು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ್ದಾರೆ. ಸುಮಾರು 4 ನಿಮಿಷಗಳ ಕಾಲ ಮಾತನಾಡಿದ ಶ್ರೀಗಳು, ನನ್ನ ಆರೋಗ್ಯ ಚೆನ್ನಾಗಿದೆ. ಯಾರು ಆತಂಕಪಡುವುದು ಬೇಡ. ನನಗೇನು ಆಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀಗಳ ಡಿಸ್ಚಾರ್ಜ್ – ಮಠ ತಲುಪಿದ ಸ್ವಾಮೀಜಿ
Advertisement
Advertisement
ಸಿದ್ದಗಂಗಾ ಶ್ರೀಗಳು ಡಿ.19 ರಂದು ರೇಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮಠ ತಲುಪಿದ್ದರು. ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನಡೆದಿದ್ದು, ಸತತ 2 ಗಂಟೆಗಳ ಕಾಲ ವೈದ್ಯರು ಶ್ರೀಗಳಿಗೆ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿದ್ದರು.
Advertisement
ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರು ಮೊದಲಿನಂತೆಯೇ ಊಟ, ಪೂಜೆ ಮಾಡುತ್ತಾರೆ. ಆದ್ದರಿಂದ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದೇವೆ. ಅವರು ರಿಕವರಿ ಆಗಿರುವುದು ಪವಾಡ. ಇದು ಯಾವುದೇ ರೆಕಾರ್ಡ್ ಅಲ್ಲ. ನಮ್ಮ ಕೆಲಸ ನಾವು ಮಾಡಿದ್ದೇವೆ. ಅವರಿಗೆ ಚಿಕಿತ್ಸೆ ನೀಡಿರುವುದು ಖುಷಿ ಇದೆ. ಸದ್ಯಕ್ಕೆ ಅವರು ವಿಶ್ರಾಂತಿ ಪಡೆಯಬೇಕಿದೆ ಎಂದು ಡಾ. ಮೊಹಮ್ಮದ್ ರೇಲಾ ಅವರು ತಿಳಿಸಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv