Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ವ್ಯಾಪಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ರಾಜ್ಯ ವ್ಯಾಪಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ

Dakshina Kannada

ರಾಜ್ಯ ವ್ಯಾಪಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ

Public TV
Last updated: July 3, 2018 9:17 am
Public TV
Share
2 Min Read
DHARMASTHALA 1
SHARE

ಮಂಗಳೂರು: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಧರ್ಮಸ್ಥಳದ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಉಜಿರೆಯಲ್ಲಿ ರಾಜ್ಯವ್ಯಾಪಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು.

ಸೋಮವಾರ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿನಲ್ಲಿ ನಡೆದ ರಾಜ್ಯವ್ಯಾಪಿ ಸ್ವಾಸ್ಥ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಅವರು, ಸುಸಂಸ್ಕೃತರಾಗಿ, ಸಮಾಜದ ಸಭ್ಯ ನಾಗರಿಕರಾಗಿ ದುಶ್ಚಟ ಮುಕ್ತ ಜೀವನ ನಡೆಸಿದರೆ ಶಾಂತಿ, ನೆಮ್ಮದಿ ಸಿಗುತ್ತದೆ. ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ. ವ್ಯಸನದಿಂದ ವ್ಯಕ್ತಿತ್ವ ನಾಶವಾಗುತ್ತದೆ ಎಂದು ಹೇಳಿದರು.

Dharmastla 1

ಸ್ವೇಚ್ಛೆಯಿಂದ, ಸಹವಾಸ ದೋಷದಿಂದ ಹಾಗೂ ಕ್ಷಣಿಕ ಸಂತೋಷಕ್ಕಾಗಿ ವಿದ್ಯಾರ್ಥಿಗಳು ಆಕರ್ಷಣೆಗೊಳಗಾಗಿ ಮದ್ಯ ವ್ಯಸನಕ್ಕೆ ಬಲಿಯಾಗಬಾರದು. ಧರ್ಮ ಎಂಬುದು ಕೇವಲ ಹಣೆಪಟ್ಟಿಗಾಗಿ ಅಲ್ಲ. ಧರ್ಮದ ಹಿನ್ನೆಲೆಯಲ್ಲಿ ನಡೆಸುವ ಆಚರಣೆಗಳು, ನಂಬಿಕೆ-ನಡವಳಿಕೆಗಳು ಮನಸ್ಸಿನ ನಿಯಂತ್ರಣದೊಂದಿಗೆ ಸನ್ಮಾರ್ಗದಲ್ಲಿ ನಡೆಯಲು ಸಹಕಾರಿಯಾಗಿವೆ ಎಂದು ತಿಳಿಸಿದರು.

ಪ್ರಪಂಚದಲ್ಲಿ ಕತ್ತಲು-ಬೆಳಕಿನಂತೆ ಸತ್ಕಾರ್ಯ ಹಾಗೂ ದುಷ್ಕೃತ್ಯ ಮಾಡಲು ಸಮಾನ ಅವಕಾಶಗಳಿವೆ. ಆಯ್ಕೆ ನಿಮ್ಮದು ಎಂದು ಹೇಳಿ, ಧರ್ಮ ಮಾರ್ಗದಲ್ಲಿ ನಡೆದು ಸದಾ ಜಾಗೃತರಾಗಿ, ಎಂದೂ ದುಶ್ಚಟಗಳಿಗೆ ಬಲಿಯಾಗಬೇಡಿ. ಆದರ್ಶ ವ್ಯಕ್ತಿತ್ವದೊಂದಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೆಗ್ಗಡೆಯವರು ಕಿವಿಮಾತು ಹೇಳಿದರು. ವಯಸ್ಕರು ಹಾಗೂ ಹಿರಿಯರು ಕೂಡಾ ವ್ಯಸನಮುಕ್ತರಾಗಿ ಆರೋಗ್ಯಪೂರ್ಣ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

Dharmastla 5

ಮದ್ಯಪಾನ ಸಂಯಮ ಮಂಡಳಿ ಮಾಜಿ ಅಧ್ಯಕ್ಷ ಎಚ್.ಸಿ. ರುದ್ರಪ್ಪ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ವಿಚಾರ ಸಂಕಿರಣ ಏರ್ಪಡಿಸಿ, ಬೀದಿ ನಾಟಕ, ಆಕಾಶವಾಣಿ ಹಾಗೂ ಇತರ ಸಮೂಹ ಮಾಧ್ಯಮಗಳ ಮೂಲಕ ಮಂಡಳಿಯು ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ ಅರಿವು, ಜಾಗೃತಿ ಮೂಡಿಸುತ್ತಿದೆ ಎಂದು ತಿಳಿಸಿದರು. ಈ ವೇಳೆ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಮೀನಾ ಕುಮಾರಿ ಈಶ್ವರ್ ಪಟಗಾರ್ ಸ್ವಾಸ್ಥ್ಯ ಸಂಕಲ್ಪದ ಕೈಪಿಡಿ ಪುಸ್ತುಕವನ್ನು ಬಿಡುಗಡೆಗೊಳಿಸಿದರು.

ಸಮಾರಂಭದ ಮುಖ್ಯ ಕೇಂದ್ರ ಬಿಂದುವಾಗಿದ್ದ ಸಾಲುಮರದ ತಿಮ್ಮಕ್ಕನವರು ಮಾತನಾಡಿ, ಮನೆಯ ವಠಾರದಲ್ಲಿ ಪ್ರತಿಯೊಬ್ಬರೂ ಒಂದೊಂದು ಗಿಡ ನೆಟ್ಟು ಪರಿಸರ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು. ವಿದ್ಯಾರ್ಥಿ ಪ್ರತಿನಿಧಿಗೆ ಒಂದು ಮಾವಿನ ಗಿಡ ನೀಡಿದರು.

Dharmastla 2

ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿ. ಮಾತನಾಡಿ, ಪಾಯಿಸ್ ಔಷಧಿಗಳ ರೂಪದಲ್ಲಿ, ಮಾಧ್ಯಮಗಳ ಮೂಲಕ ಮದ್ಯ ಮಾರಾಟದ ಜಾಲ ಯುವ ಜನತೆಯನ್ನು ಅಡ್ಡ ದಾರಿಗೆ ಹೋಗುವಂತೆ ಮಾಡುತ್ತದೆ. ಜನಜಾಗೃತಿ ವೇದಿಕೆ ವತಿಯಿಂದ ಶಾಲಾ-ಕಾಲೇಜುಗಳಲ್ಲಿ ವರ್ಷಕ್ಕೆ ಒಂದು ಸಾವಿರ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಆಯೋಜಿಸಿ ಒಂದು ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಇದಕ್ಕಾಗಿ 918 ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಸತೀಶ್ ಹೊನ್ನವಳ್ಳಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿಗಳು, ಮದ್ಯಪಾನಾದಿ ಮಾದಕ ದ್ರವ್ಯಗಳ ಆಕರ್ಷಣೆಗೊಳಗಾಗದೆ, ದುಶ್ಚಟಗಳಿಂದ ದೂರವಾಗಿ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು, ಉತ್ತಮ ಸಂಸ್ಕಾರವಂತರಾಗಿ ಆದರ್ಶ ವಿದ್ಯಾರ್ಥಿಗಳಾಗಿ ಸಮಾಜದ ಸತ್ಪ್ರಜೆಗಳಾಗಿ ಉತ್ತಮ ಜೀವನ ನಡೆಸುವುದಾಗಿ ಗಣ್ಯರ ಎದುರು ಪ್ರಮಾಣ ವಚನ ಸ್ವೀಕರಿಸಿದರು.

ಮಾಣಿಪಾಲದ ಮೋಹನದಾಸ ಸ್ವಾಮೀಜಿ, ಹೇಮಾವತಿ ವಿ. ಹೆಗ್ಗಡೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಎನ್. ಕೇಶವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Dharmastla 3

TAGGED:dharmasthalaMangaluruPublic TVVirendra Hegdewellness programಧರ್ಮಸ್ಥಳಪಬ್ಲಿಕ್ ಟಿವಿಮಂಗಳೂರುವೀರೇಂದ್ರ ಹೆಗ್ಗಡೆಸ್ವಾಸ್ಥ್ಯ ಕಾರ್ಯಕ್ರಮ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
49 seconds ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
36 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
56 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?