ಹಾಸನ: ಮಠಗಳನ್ನು ಸರ್ಕಾರದ ಸುರ್ಪದಿಗೆ ಪಡೆಯುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರೋಧ ವ್ಯಕ್ತಪಡಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ಮಾತನಾಡಿದ ಅವರು, ಧರ್ಮ ಬೇರೆ. ರಾಜಕಾರಣ ಬೇರೆ. ಎರಡನ್ನು ಒಟ್ಟಿಗೆ ನೋಡಬಾರದು ಎಂದಿದ್ದಾರೆ. ಈ ಬಗ್ಗೆ ನನಗೆ ಖಚಿತ ಮಾಹಿತಿ ಇಲ್ಲ. ಹಾಗೇನಾದ್ರು ಆದ್ರೆ ಅದಕ್ಕೆ ಸ್ಪಷ್ಟವಾಗಿ ವಿರೋಧಿಸುವುದು ನನ್ನ ಅಭಿಪ್ರಾಯ ಅಂತ ಹೇಳಿದ್ದಾರೆ.
Advertisement
ಧರ್ಮಕ್ಕೆ ರಾಜಕಾರಣದ ಸೊಂಕು ತಗಲಬಾರದು. ಇದು ತಪ್ಪು. ಎಲ್ಲವನ್ನೂ ರಾಷ್ಟ್ರೀಕರಣ ಮಾಡಲು ಸಾಧ್ಯವಿಲ್ಲ. ಇದು ಒಪ್ಪತಕ್ಕುದ್ದಲ್ಲ. ಇದಕ್ಕೆ ವಿರೋಧಿಸುವ ಮತ್ತು ಪ್ರತಿಭಟನೆ ಮಾಡುವ ಕುರಿತು ಬೇರೆ ರೀತಿ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.
Advertisement
ರಾಜ್ಯದ ಮಠ, ದೇವಸ್ಥಾನ, ಧಾರ್ಮಿಕ ಸಂಸ್ಥೆಗಳೇ ಸಿಎಂ ಸಿದ್ದರಾಮಯ್ಯ ಟಾರ್ಗೆಟ್ ಮಾಡುತ್ತಿದ್ದು, ಸರ್ಕಾರಕ್ಕೆ ಇನ್ನು 3 ತಿಂಗಳ ಅವಧಿ ಇರುವಾಗಲೇ ಆಪರೇಷನ್‍ಗೆ ಕೈ ಹಾಕಿಬಿಟ್ರಾ ಅನ್ನೋ ಮಾತುಗಳು ಕೇಳಿಬರುತ್ತಿವೆ. ಮಠಗಳು, ದೇವಸ್ಥಾನಗಳು, ಧಾರ್ಮಿಕ ಸಂಸ್ಥೆಗಳ ಮೇಲೆ ಸಿದ್ದರಾಮಯ್ಯ ಕಣ್ಣಿಟ್ಟಿದ್ದು, ಇವುಗಳನ್ನು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ತರಲು ಕರಡು ರಚನೆಗೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಸಾರ್ವಜನಿಕ ಅಭಿಪ್ರಾಯ, ಆಕ್ಷೇಪಣೆಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ ಎನ್ನಲಾಗಿದೆ.
Advertisement
Advertisement
ಜ.29ರಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿ, 15 ದಿನದೊಳಗಾಗಿ ಸಾರ್ವಜನಿಕ ಅಭಿಪ್ರಾಯ, ಸಲಹೆ ನೀಡುವಂತೆ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಧಾರ್ಮಿಕ ಸಂಸ್ಥೆಗಳನ್ನು ಧಾರ್ಮಿಕ ದತ್ತಿ ಕಾಯ್ದೆಗೆ ಒಳಪಡಿಸಬೇಕೆ? ಬೇಡವೇ.? ಒಳಪಡಿಸಬೇಕಿದ್ರೆ ಎಷ್ಟರಮಟ್ಟಿಗೆ ಒಳಪಡಿಸಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಅಭಿಪ್ರಾಯ ಕೇಳಿದೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.