ಡಾ.ವಿಷ್ಣು ನೆನಪಲ್ಲಿ ಕ್ರಿಕೆಟ್: ಆ.12 ಮತ್ತು13ಕ್ಕೆ ‘ಯಜಮಾನ ಪ್ರೀಮಿಯರ್ ಲೀಗ್’ ಸೀಸನ್ 2

Public TV
2 Min Read
Vishnuvardhan

ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ (Cricket) ಪಂದ್ಯ ಶುರು ಮಾಡಿದ ಕೀರ್ತಿ ಡಾ.ವಿಷ್ಣುವರ್ಧನ್ (Vishnuvardhan) ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣು ಸದಾ ಕ್ರಿಕೆಟ್ ಆಡುತ್ತಿದ್ದರು. ವೃತ್ತಿಪರ ಕ್ರಿಕೆಟ್ ಆಟಗಾರರ ಜೊತೆಯೂ ಅವರು ಪಂದ್ಯಾವಳಿಗಳನ್ನು ಆಡಿದ್ದೂ ಇದೆ. ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಕೂಡ ‘ಯಜಮಾನ ಪ್ರೀಮಿಯರ್ ಲೀಗ್’ (Yajamana Premier League) ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದಾರೆ.

Vishnuvardhan 1

ಈ ಹಿಂದೆ ಜೂನ್ ನಲ್ಲಿಯೇ ಯಜಮಾನ ಪ್ರೀಮಿಯರ್ ಲೀಗ್ ಸೀಸನ್ 2 ಆಯೋಜನೆ ಆಗಿತ್ತು. ಮಳೆ ಮತ್ತು ಇತರ ಕಾರಣಗಳಿಂದಾಗಿ ಅದು ಮುಂದೂಡಲ್ಪಟ್ಟಿತ್ತು. ಇದೀಗ ಯಜಮಾನ ಪ್ರೀಮಿಯರ್ ಲೀಗ್ ಆಗಸ್ಟ್ 12 ಮತ್ತು 13ರಂದು ಬಿಐಸಿಸಿ ಇನ್ಫಿನಿಟಿ ಔಟ್ ಡೋರ್ ಗ್ರೌಂಡ್ ಮಾಗಡಿ ರಸ್ತೆ, ಬೆಂಗಳೂರಿನಲ್ಲಿ ನಡೆಯಲಿದೆ. ಇದನ್ನೂ ಓದಿ:ಟೆಂಪಲ್ ರನ್ ಮುಗಿಸಿ ಫೋಟೋಶೂಟ್ ನಲ್ಲಿ ಭಾಗಿಯಾದ ಸಾರಾ ಅಲಿ ಖಾನ್

vishnuvardhan 1

ಎರಡು ದಿನಗಳ ಕಾಲ ನಡೆಯುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡದ ಹೆಸರಾಂತ ನಟರಾದ ನೀನಾಸಂ ಸತೀಶ್, ವಸಿಷ್ಠ ಸಿಂಹ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ ಮತ್ತು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

Vishnuvardhan 4

ಡಾ.ವಿಷ್ಣು ಸೇನಾ ಸಮಿತಿಯು ಹಮ್ಮಿಕೊಂಡಿರುವ ಎರಡನೇ ಸೀಸನ್ ಇದಾಗಿದ್ದು, ವೀರಕಪುತ್ರ ಶ್ರೀನಿವಾಸ್ (Veerkaputra Srinivas) ನೇತೃತ್ವದಲ್ಲಿ ವಿಷ್ಣು ಸೇನಾನಿಗಳು ಪಂದ್ಯಗಳನ್ನು ಆಡಲಿದ್ದಾರೆ. ವಿಷ್ಣುವರ್ಧನ್ ಹೆಸರಿನಲ್ಲಿ ವೀರಕಪುತ್ರ ಶ್ರೀನಿವಾಸ್ ಅವರು ಹತ್ತಾರು ಕೆಲಸಗಳನ್ನು ಮಾಡುತ್ತಾ ಬಂದಿದ್ದು, ಅದಕ್ಕೆ ಸೇರ್ಪಡೆ ಈ ಯಜಮಾನ ಕಪ್ ಆಗಿದೆ. ಜನಪರ ಕೆಲಸಗಳ ಜೊತೆಗೆ ಕ್ರೀಡಾ ಲೋಕಕ್ಕೂ ಉತ್ತೇಜನ ಕೊಡುವ ನಿಟ್ಟಿನಲ್ಲಿ ಈ ಪಂದ್ಯಾವಳಿ ಆಯೋಜನೆಗೊಂಡಿದೆ.

 

ಯಜಮಾನರ ಹೆಸರಿನಲ್ಲಿ ಕ್ರಿಕೆಟ್ ಆಡುವುದು ಎಲ್ಲರಿಗೂ ಸಂಭ್ರಮ ತರುವ ವಿಚಾರ. ಮೊದಲಿನಿಂದಲೂ ಯಜಮಾನರು ಕಲೆ, ಸಂಗೀತ, ಕ್ರಿಕೆಟ್ ಗೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿದ್ದಾರೆ. ಸ್ವತಃ ಅವರು ಕೂಡ ಕ್ರಿಕೆಟ್ ಆಡುತ್ತಿದ್ದರು. ಅವರ ನೆನಪಿನಲ್ಲಿ ನಾವೆಲ್ಲ ಕ್ರಿಕೆಟ್ ಆಡುತ್ತೇವೆ. ಇದಕ್ಕೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಜೊತೆಯಾಗುತ್ತಿದ್ದಾರೆ. ಪ್ರತಿ ವರ್ಷವೂ ಇದನ್ನು ಆಯೋಜನೆ ಮಾಡುತ್ತೇವೆ ಎನ್ನುವುದು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರ ಮಾತು.

Web Stories

Share This Article