ಸಾಹಸ ಸಿಂಹ ಡಾ.ವಿಷ್ಣುವರ್ಧನ್ (Vishnuvardhan) ಅವರ 72ನೇ ಜನ್ಮದಿನವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಜನ್ಮದಿನಕ್ಕೆ ಚಾಲನೆ ನೀಡಿದ್ದಾರೆ. 72ನೇ ಜನ್ಮದಿನಾಚರಣೆ (Birthday) ಹಿನ್ನೆಲೆ ಡಾ. ವಿಷ್ಣುವರ್ಧನ್ ಅಭಿನಯದ ಚಿತ್ರಗಳ ಐವತ್ತು ಕಟೌಟ್ ಗಳನ್ನು ಅಭಿಮಾನ ಸ್ಟುಡಿಯೋ ಮುಂದೆ ನಿಲ್ಲಿಸಲಾಗಿದೆ. ಅಲ್ಲದೇ ಅಭಿಮಾನಿಗಳ ಸಾಗರವೇ ಅಲ್ಲಿ ಹರಿದು ಬಂದಿದೆ.
Advertisement
ಅಭಿಮಾನ್ ಸ್ಟುಡಿಯೋ (Abhiman Studio) ಬಳಿ ರಾರಾಜಿಸುತ್ತಿರುವ ಡಾ.ವಿಷ್ಣುವರ್ಧನ್ ಕಟೌಟ್ ಗಳು (Cutout) ಯಜಮಾನ, ಸಾಹಸ ಸಿಂಹ, ಕೃಷ್ಣ ನೀ ಬೇಗನೆ ಬಾ, ಜಯಸಿಂಹ, ವೀರಪ್ಪ ನಾಯಕ, ಜನ ನಾಯಕ, ದಾದ, ಕೃಷ್ಣ ರುಕ್ಮಿಣಿ, ಹೃದಯ ಗೀತೆ, ದೇವ, ಮತ್ತೆ ಹಾಡಿತು ಕೋಗಿಲೆ, ಲಯನ್ ಜಗಪತಿ ರಾವ್, ರಾಜಧೀರಾಜಾ, ರಾಯರು ಬಂದರು ಮಾವನ ಮನೆಗೆ, ಮಹಾಕ್ಷತ್ರಿಯ, ಮುತ್ತಿನ ಹಾರ, ದಣಿ, ಜನನಿ ಜನ್ಮಭೂಮಿ, ಸೂರ್ಯ ವಂಶ, ಸೂರಪ್ಪ, ದಿಗ್ಗಜರು, ಕೋಟಿಗೊಬ್ಬ, ಸಿಂಹಾದ್ರಿಯ ಸಿಂಹ, ರಾಜ ನರಸಿಂಹ, ಆಪ್ತಮಿತ್ರ, ಸಾಹುಕಾರ, ವರ್ಷ, ಕರ್ನಾಟಕ ಸುಪುತ್ರ, ಹಲೋ ಡ್ಯಾಡಿ, ಅಪ್ಪಾಜಿ, ಸ್ಕೂಲ್ ಮಾಸ್ಟರ್, ಆಪ್ತರಕ್ಷಕ, ಚಿನ್ನದಂತ ಮಗ, ವಿಷ್ಣುಸೇನಾ, ನಾಗರಹಾವು, ಗಂಧದ ಗುಡಿ, ಶುಭ ಮಿಲನ ಚಿತ್ರಗಳ ಕಟೌಟ್ ಗಳಾಗಿವೆ. ಇದನ್ನೂ ಓದಿ: ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ: ಮೋದಿ ಹುಟ್ಟುಹಬ್ಬಕ್ಕೆ ರಮ್ಯಾ ವಿಶ್
Advertisement
Advertisement
ಅಲ್ಲದೇ ಹುಟ್ಟುಹಬ್ಬಕ್ಕಾಗಿಯೇ ಅಭಿಮಾನಿಗಳು ಸ್ಟುಡಿಯೋ ಬಳಿ ರಕ್ತದಾನ, ಅನ್ನದಾನ, ನೇತ್ರದಾನ ಸೇರಿದಂತೆ ಹಲವು ಜನಪರ ಕೆಲಸಗಳನ್ನು ಹಮ್ಮಿಕೊಂಡಿದ್ದಾರೆ. ಬೆಳಗ್ಗೆಯಿಂದಲೇ ಅಭಿಮಾನ ಸ್ಟುಡಿಯೋಗೆ ಆಗಮಿಸಿರುವ ಅಭಿಮಾನಿಗಳು ನೆಚ್ಚಿನ ನಟನಿಗೆ ಪೂಜೆ ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಸಾವಿರಾರು ಅಭಿಮಾನಿಗಳು ಸಮಾಧಿ ಬಳಿ ಜಮಾಯಿಸಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಾರೆ.
Advertisement
ಇದೇ ಸಂದರ್ಭದಲ್ಲಿ ಕನ್ನಡದ ಹಿರಿಯ ನಟಿ ರಮೇಶ್ ಭಟ್ (Ramesh bhat) ಕೂಡ ಸಮಾಧಿಗೆ ಬಂದು ಪೂಜೆ ಸಲ್ಲಿಸಿದರು. ವಿಷ್ಟುವರ್ಧನ್ ಅವರ ಜೊತೆಗಿನ ಒಡನಾಟವನ್ನು ಹಂಚಿಕೊಂಡರು. ಪ್ರತಿ ವರ್ಷವೂ ರಮೇಶ್ ಭಟ್ ಸಮಾಧಿಗೆ ಬಂದು ಪೂಜೆ ಸಲ್ಲಿಸುತ್ತಾರೆ. ಕೆಲವು ಹೊತ್ತು ಅಭಿಮಾನಿಗಳ ಜೊತೆ ಬೆರೆಯುತ್ತಾರೆ. ಆದರೆ ಈ ಸ್ಮಾರಕದ ಬಳಿ ವಿಷ್ಣು ಕುಟುಂಬ ಬರದೇ ಮನೆಯಲ್ಲೇ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಾರೆ.