ಪ್ರಯಾಗ್‌ರಾಜ್: 144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbh Mela) ಪಾಲ್ಗೊಂಡ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಂದು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ಪ್ರಯಾಗ್‌ರಾಜ್‌ಗೆ (Prayagraj) ಬಂದಿಳಿದ ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು. ಇದನ್ನೂ ಓದಿ: ವಿಷ ಕುಡಿಯುವ ಪ್ರತಿಭಟನೆಗೆ ಕಿಯೋನಿಕ್ಸ್ ವೆಂಡರ್ಸ್ ಕರೆ – ಕಚೇರಿ ಎದುರು ಹೈಡ್ರಾಮಾ
Advertisement
ರಾಷ್ಟçಪತಿ ದ್ರೌಪದಿ ಮುರ್ಮು 8 ಗಂಟೆಗಳ ಕಾಲ ಪ್ರಯಾಗ್‌ರಾಜ್‌ನಲ್ಲಿ ಸಮಯ ಕಳೆಯಲಿದ್ದಾರೆ. ಅಕ್ಷಯವತ್ ಹಾಗೂ ಹನುಮಾನ್ ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ. ಇದನ್ನೂ ಓದಿ: ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗುತ್ತೆ: ರಾಮಲಿಂಗಾ ರೆಡ್ಡಿ
Advertisement
Advertisement
ಭಾನುವಾರ ತ್ರಿವೇಣಿ ಸಂಗಮದಲ್ಲಿ ಸುಮರು 8.4 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳ ಶುರುವಾದಾಗಿನಿಂದ ಇಲ್ಲಿಯವರೆಗೆ 42 ಕೋಟಿಗೂ ಅಧಿಕ ಜನರು ತ್ರಿವೇಣಿಯಲ್ಲಿ ಮಿಂದೆದ್ದಿದ್ದಾರೆ. ಇದನ್ನೂ ಓದಿ: ಡಿಕೆಶಿ ಪುಣ್ಯಸ್ನಾನ – ಎಷ್ಟು ಪಾಪ ಕಳೀತು ಅಂತ ಖರ್ಗೆ ವರದಿ ಪಡೆಯಬೇಕು: ಯತ್ನಾಳ್ ಲೇವಡಿ
Advertisement