ಬೆಂಗಳೂರು: ರಾಜ್ಯಕ್ಕೆ ಆಗಮಿಸಿದ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಸ್ವಾಗತ ಕೋರಿದರು.
ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರಚಾರದ ನಿಮಿತ್ತ ರಾಜ್ಯ ರಾಜಧಾನಿ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಹೋಟೆಲ್ಗೆ ಆಗಮಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವರು ಇದ್ದರು. ಆದರೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಡವಾಗಿ ಆಗಮಿಸಿದರು. ಇದನ್ನೂ ಓದಿ: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ – 1,200 ಕೆಜಿ ಮೇಲ್ಪಟ್ಟ ವಾಹನಗಳಿಗೆ ನಿಷೇಧ
ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಬೆಂಗಳೂರಿಗೆ ಪ್ರಚಾರ ಸಭೆಗೆ ಆಗಮಿಸಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮತ್ತು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿ ಬೆಂಬಲ ಕೋರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಪ್ರತಿಭಟನಾಕಾರರಿಗೆ ಸಿಕ್ತು ಲಕ್ಷ ಲಕ್ಷ ಹಣ!