ನವದೆಹಲಿ: ಭಾರತದ ಸೇನೆಗೆ (Indian Army) ಪರಮಾಣು ಶಸ್ತ್ರಾಸ್ತ್ರಗಳ ಬಲ ನೀಡಿದ್ದ ಪ್ರಖ್ಯಾತ ವಿಜ್ಞಾನಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (DRDO) ಮಾಜಿ ಮುಖ್ಯಸ್ಥ ವಿ.ಎಸ್ ಅರುಣಾಚಲಂ (82) ಅವರು ಅಮೆರಿಕಾದಲ್ಲಿ (America) ನಿಧನರಾಗಿದ್ದಾರೆ.
1982 ರಿಂದ 1992ರ ನಡುವೆ ಹತ್ತು ವರ್ಷಗಳ ಕಾಲ ಡಿಆರ್‌ಡಿಒ ಮುಖ್ಯಸ್ಥರಾಗಿ ಮತ್ತು ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರರಾಗಿ ಅವರು ಸೇವೆ ಸಲ್ಲಿಸಿದ್ದರು. ನಿವೃತ್ತಿಯ ಬಳಿಕ ಅಮೆರಿಕಾದಲ್ಲಿ ನೆಲೆಸಿದ್ದರು. ನ್ಯುಮೋನಿಯಾ ಮತ್ತು ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ಕರುನಾಡ ಮಂದಿಗೆ ಮತ್ತೊಂದು ಶಾಕ್- ಬೇಳೆ, ತರಕಾರಿ ಬಳಿಕ ಅಕ್ಕಿ ಬೆಲೆಯೂ ದುಬಾರಿ
Advertisement
Advertisement
ಡಿಆರ್‌ಡಿಒ ಅತ್ಯಂತ ಸ್ಫೂರ್ತಿದಾಯಕ ನಾಯಕರಲ್ಲಿ ಅವರು ಒಬ್ಬರಾಗಿದ್ದರು. ಅವರ ಅಧಿಕಾರ ಅವಧಿಯಲ್ಲಿ ಡಿಆರ್‌ಡಿಒ ಸಣ್ಣ ಯೋಜನೆಗಳ ಸಂಸ್ಥೆಯಿಂದ ಬಹು-ಮಿಷನ್ ಸಂಸ್ಥೆಯಾಗಿ ರೂಪಾಂತರಗೊಂಡಿತು. ಸಂಕೀರ್ಣ ಮತ್ತು ಅತ್ಯಾಧುನಿಕ ಯೋಜನೆಗಳನ್ನು ಯೋಜಿಸಿ ಮತ್ತು ಕಾರ್ಯಗತಗೊಳಿಸಿತು. ಲಘು ಯುದ್ಧ ವಿಮಾನ ಮತ್ತು ಮೇನ್ ಬ್ಯಾಟಲ್ ಟ್ಯಾಂಕ್ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳು ಅವರ ನೇತೃತ್ವದಲ್ಲಿ ಪ್ರಾರಂಭವಾಯಿತು. ಅವರು ದೀರ್ಘಾವಧಿಯ ದೂರದೃಷ್ಟಿ ಮತ್ತು ಉತ್ತಮ ನಾಯಕತ್ವದ ಗುಣಗಳನ್ನು ಹೊಂದಿದ್ದರು ಎಂದು ಅವರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಮಾಜಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
Advertisement
ಅರುಣಾಚಲಂ ಅವರು ಮುಂಬೈನ ಭಾಭಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಡಿಫೆನ್ಸ್ ಮೆಟಲರ್ಜಿಕಲ್ ಸಂಶೋಧನಾ ಪ್ರಯೋಗಾಲಯವನ್ನು ಸೇರುವ ಮೊದಲು ಬೆಂಗಳೂರಿನ ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಅತೀ ಚಿಕ್ಕ ವಯಸ್ಸಿನಲ್ಲೇ ಅವರಿಗೆ 1980 ರಲ್ಲಿ ಭಟ್ನಾಗರ್ ಪ್ರಶಸ್ತಿಯೂ ಲಭಿಸಿತ್ತು. ಅವರು ಡಿಆರ್‌ಡಿಒ ಮುಖ್ಯಸ್ಥರಾಗಿ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕಗೊಂಡಾಗ ಅವರ ವಯಸ್ಸು ಕೇವಲ 40 ಆಗಿತ್ತು. ಅವರ ನಂತರ ಎಪಿಜೆ ಅಬ್ದುಲ್ ಕಲಾಂ ಅಧಿಕಾರ ವಹಿಸಿಕೊಂಡಿದ್ದರು. ಇದನ್ನೂ ಓದಿ: ಮಣಿಪುರ ಹಿಂಸಾಚಾರ ತನಿಖೆಗೆ 53 ಸಿಬಿಐ ಅಧಿಕಾರಿಗಳ ನಿಯೋಜನೆ
Web Stories