ನೀರು ಕುಡಿಯುವುದರಿಂದ ದೇಹಕ್ಕೆ ಎಷ್ಟು ಲಾಭ ಇದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲೂ ಬಿಸಿನೀರಿನಿಂದ (Warm Water) ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಇದೆ. ಆರೋಗ್ಯ ತಜ್ಞರು ಕೂಡ ಬೆಳಗ್ಗೆ ಎದ್ದ ತಕ್ಷಣ ಮೊದಲು ಬಿಸಿ ನೀರು ಕುಡಿಯುವಂತೆ ಹೇಳುತ್ತಾರೆ. ಆದರೆ ರಾತ್ರಿ ಮಲಗುವ ಮುನ್ನ ಬಿಸಿನೀರು ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ (Health Benifits) ಎಂಬುದು ಇಲ್ಲಿ ಗಮನಾರ್ಹ. ಮಲಗುವ ಮುನ್ನ 1 ಲೋಟ ಬೆಚ್ಚಗಿನ ನೀರನ್ನು ಕುಡಿಯುವುದು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಜೊತೆಗೆ ಇತರ ಅನೇಕ ಸಮಸ್ಯೆಗಳಿಗೂ ರಾಮಬಾಣವಾಗಿದೆ.
ಬಿಸಿ ನೀರು ಕುಡಿಯುವುದರಿಂದ ಆಗುವ ಲಾಭಗಳೇನು?:
* ಬಿಸಿನೀರು ನಿಮ್ಮ ದೇಹದ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನೀವು ಬಿಸಿ ನೀರಿಗೆ ಸ್ವಲ್ಪ ನಿಂಬೆ ರಸವನ್ನು ಕೂಡ ಸೇರಿಸಬಹುದು. ಇದರಿಂದ ನಿಮಗೆ ಶಕ್ತಿಯೂ ಸಿಗುತ್ತದೆ.
* ಉಗುರುಬೆಚ್ಚನೆಯ ನೀರನ್ನು ಕುಡಿಯುವುದು ತೂಕವನ್ನು ಕಡಿಮೆ ಮಾಡುತ್ತದೆ. ರಾತ್ರಿ ಊಟವಾದ ಅರ್ಧ ಗಂಟೆಯ ನಂತರ ಅಥವಾ ಮಲಗುವ ಒಂದು ಅಥವಾ ಎರಡು ಗಂಟೆಗಳ ಮೊದಲು ಉಗುರು ಬೆಚ್ಚಗಿನ ನೀರನ್ನು ಕುಡಿಯುವುದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅಲ್ಲದೆ ಬೆಳಗ್ಗೆ ದೇಹದಿಂದ ವಿಷವನ್ನು ಹೊರಹಾಕುತ್ತದೆ.
Advertisement
Advertisement
* ರಾತ್ರಿ ಮಲಗುವ ಮುನ್ನ ಉಗುರುಬೆಚ್ಚನೆಯ ನೀರು ಕುಡಿಯುವುದರಿಂದ ಒತ್ತಡ ಮತ್ತು ಖಿನ್ನತೆ ಕಡಿಮೆಯಾಗುತ್ತದೆ. ನೀರಿನ ಕೊರತೆಯು ನಿಮ್ಮ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ರಾತ್ರಿ ಮಲಗುವ ಮೊದಲು ಬೆಚ್ಚಗಿನ ನೀರನ್ನು ಕುಡಿಯುವುದು ನಿದ್ರೆಗೆ ಸಹಾಯ ಮಾಡುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ.
* ರಾತ್ರಿ ಮಲಗುವ ಮುನ್ನ ಬಿಸಿನೀರು ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಅನೇಕ ಕಾಯಿಲೆಗಳು ನಿಯಂತ್ರಣಕ್ಕೆ ಬರುತ್ತವೆ. ಮಲಬದ್ಧತೆ, ಅಜೀರ್ಣಕ್ಕೆ ಬಿಸಿ ನೀರು ರಾಮಬಾಣವಾಗಿರುತ್ತದೆ. ರಾತ್ರಿಯಲ್ಲಿ ನಮ್ಮ ಜೀರ್ಣಾಂಗ ವ್ಯವಸ್ಥೆಯು ದುರ್ಬಲವಾಗಿರುತ್ತದೆ. ಹೀಗಾಗಿ ಬಿಸಿನೀರು ಕುಡಿಯುವುದರಿಂದ ನಿಮ್ಮ ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ.
Advertisement
Advertisement
* ವಯಸ್ಸು ಹೆಚ್ಚಾದಂತೆ ಮುಖದಲ್ಲಿ ಸುಕ್ಕುಗಳು ಕಾಣಿಸಿಕೊಳ್ಳುತ್ತವೆ. ಈ ಸಮಸ್ಯೆ ನಿಮ್ಮಲ್ಲೂ ಕಂಡುಬರುತ್ತಿದ್ದರೆ ಈ ಕ್ಷಣದಿಂದಲೇ ಬಿಸಿನೀರು ಕುಡಿಯಲು ಪ್ರಾರಂಭಿಸಿ. ಬಿಸಿನೀರು ಚರ್ಮವನ್ನು ಬಿಗಿಗೊಳಿಸುವುದರ ಜೊತೆಗೆ ಕಾಂತಿಯನ್ನು ಹೆಚ್ಚಿಸುತ್ತದೆ.
* ವಾಸ್ತವವಾಗಿ ಬಿಸಿನೀರು ಕೊಬ್ಬನ್ನು ಸುಡುತ್ತದೆ. ಇದರಿಂದ ಜೀರ್ಣಕ್ರಿಯೆಯೂ ಉತ್ತಮವಾಗಿ ಉಳಿಯುತ್ತದೆ ಮತ್ತು ನೀರು ಕುಡಿಯುವುದರಿಂದ ಮತ್ತೆ ಮತ್ತೆ ಹಸಿವಾಗುವುದಿಲ್ಲ.