Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಸಿಗೆಗೆ ಮಂಡ್ಯದ 239 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೇಸಿಗೆಗೆ ಮಂಡ್ಯದ 239 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಸಾಧ್ಯತೆ

Districts

ಬೇಸಿಗೆಗೆ ಮಂಡ್ಯದ 239 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಸಾಧ್ಯತೆ

Public TV
Last updated: March 5, 2026 2:54 pm
Public TV
Share
3 Min Read
DRINKING WATER 1
SHARE

ಮಂಡ್ಯ: ಪಂಚ ನದಿಗಳ ಬೀಡು ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆಯಲ್ಲಿ (Summer) ಕುಡಿಯುವ ನೀರಿನ ಅಭಾವ ಹೆಚ್ಚಾಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಉದ್ಭವಿಸಬಹುದಾದ 239 ಸಂಭವನೀಯ ಗ್ರಾಮಗಳನ್ನ ಪಟ್ಟಿ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಸಮಸ್ಯೆ ಮತ್ತಷ್ಟು ಜಟಿಲವಾದರೂ ಆಶ್ಚರ್ಯ ಪಡುವಂತಿಲ್ಲ.

ಬೇಸಿಗೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ (Drinking Water) ಅಭಾವ ಉಂಟಾಗುವ ಗ್ರಾಮಗಳನ್ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಈಗಾಗಲೇ ಪಟ್ಟಿ ಮಾಡಿಕೊಂಡಿದ್ದು, ಬೇಸಿಗೆಯಲ್ಲಿ ನೀರಿನ ದಾಹ ನೀಗಿಸಲು ಸಿದ್ಧತೆ ಕೈಗೊಂಡಿದ್ದಾರೆ. ಆದ್ರೆ ಟ್ಯಾಂಕರ್ (Tanker Water) ಮೂಲಕ ನೀರು ಸರಬರಾಜು ಮಾಡಲಾಗುವ ಗ್ರಾಮಗಳ ಸಂಖ್ಯೆ ಪಟ್ಟಿಯಲ್ಲಿ ಇಲ್ಲದಿರುವುದು ಸಮಾಧಾನದ ಸಂಗತಿಯಾಗಿದೆ. ಆದರೆ, ಈ ನಡುವೆ ಮಂಡ್ಯ ತಾಲ್ಲೂಕಿನ ಮೊಳೆಕೊಪ್ಪಲು ಗ್ರಾಮದಲ್ಲಿ ಈಗಾಗಲೇ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದು ಎಚ್ಚರಿಕೆ ಗಂಟೆಯಾಗಿದೆ.

Mandya River

ಬೇಸಿಗೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉದ್ಭವಿಸಬಹುದಾದ ಒಟ್ಟು 239 ಗ್ರಾಮಗಳನ್ನ ಗುರುತು ಮಾಡಿದ್ದು, 206 ಖಾಸಗಿ ಬೋರ್‌ವೆಲ್‌ಗಳನ್ನ ಗುರುತಿಸಲಾಗಿದೆ. ಉಳಿದಂತೆ ಜಿಲ್ಲೆಯಲ್ಲಿ 33 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಉದ್ದೇಶಿಸಿರುವ ಗ್ರಾಮಗಳನ್ನ ಗುರುತು ಮಾಡಲಾಗಿದೆ. ಈ ಗ್ರಾಮಗಳಿಗೆ ಯಾವುದೇ ಸಂದರ್ಭದಲ್ಲೂ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಅದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇರುವ ಸಂಭಾವ್ಯ ಗ್ರಾಮಗಳನ್ನು ಗುರುತಿಸಿ ನೀರಿನ ದಾಹ ನೀಗಿಸಲು ಸಿದ್ಧತೆ ಮಾಡಿಕೊಂಡಿದೆ.

ಮುಂದಿನ ದಿನಗಳಲ್ಲಿ ಇದೇ ರೀತಿ ಬಿಸಿಲಿನ ವಾತಾವರಣವಿದ್ದಿದ್ದೆ ಆದಲ್ಲಿ, ಈ ಸಮಸ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಹೆಚ್ಚಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಪಂಚ ನದಿಗಳು ಹರಿದರೂ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗುತ್ತಿರುವುದು ವಿಪಾರ್ಯಸವೇ ಸರಿ.

Siddaramaiah govt hikes drinking water Tax BWSSB

ಜಿಲ್ಲೆಯಲ್ಲಿ ಬೇಸಿಗೆಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಬಹುದಾದ 239 ಗ್ರಾಮಗಳನ್ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ತಾಲ್ಲೂಕುವಾರು ಪಟ್ಟಿ ಮಾಡಿದೆ. ಕೆ.ಆರ್ ಪೇಟೆ 67, ಮದ್ದೂರು 29, ಮಳವಳ್ಳಿ 31, ಮಂಡ್ಯ 32, ನಾಗಮಂಗಲ 43, ಪಾಂಡವಪುರ 27 ಹಾಗೂ ಶ್ರೀರಂಗಪಟ್ಟಣ 10 ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಾಧ್ಯತೆ ಇರುವ ಬಗ್ಗೆ ಪಟ್ಟಿ ತಯಾರಿಸಿ, ಮುಂಜಾಗ್ರತ ಕ್ರಮ ಅನುಸರಿಸಿದೆ.

ಪಂಚ ನದಿಗಳ ಬೀಡಲ್ಲು ನೀಗದ ದಾಹ:
ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಲೋಕಪಾವನಿ, ಶಿಂಷಾ ಹಾಗೂ ವೀರ ವೈಷ್ಣವಿ ಪಂಚ ನದಿಗಳು ಜಿಲ್ಲಾ ವ್ಯಾಪ್ತಿಯಲ್ಲಿ ಹರಿದರೂ ಪ್ರತಿ ವರ್ಷ ಬೇಸಿಗೆಗೆ ಕುಡಿಯುವ ನೀರಿಗೆ ಅಭಾವ ಉಂಟಾಗುತ್ತಿರುವುದು ಮಾತ್ರ ದುರ್ದೈವವೇ ಸರಿ.

Mandya Girl Murder Hemavati River 6

206 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗಳೇ ಗತಿ:
ಕುಡಿಯುವ ನೀರಿಗೆ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇರುವುದರಿಂದ ಜಿಲ್ಲಾ ಪಂಚಾಯಿತಿ 206 ಖಾಸಗಿ ಕೊಳವೆ ಬಾವಿಗಳನ್ನ ಗುರುತಿಸಿಕೊಂಡಿದೆ. ಗ್ರಾಮಗಳಿಗೆ ಕುಡಿಯುವ ನೀರು ಅಭಾವ ಸೃಷ್ಟಿಯಾದರೆ ಖಾಸಗಿ ಬೋರ್‌ವೆಲ್‌ಗಳ ಮೂಲ ನೀರು ಪೂರೈಸಲು ಸಿದ್ದತೆ ಮಾಡಿಕೊಂಡಿದೆ. ತಾಲ್ಲೂಕುವಾರು ಖಾಸಗಿ ಬೋರ್‌ವೆಲ್ ಗುರುತಿಸಿದ್ದು, ಕೆ.ಆರ್ ಪೇಟೆ 55, ಮದ್ದೂರು 29, ಮಳವಳ್ಳಿ 30, ಮಂಡ್ಯ 32, ನಾಗಮಂಗಲ 43, ಪಾಂಡವಪುರ 21 ಹಾಗೂ ಶ್ರೀರಂಗಪಟ್ಟಣ 4 ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನ ಗುರುತಿಸಲಾಗಿದೆ.

ನಿಷ್ಕೃಯಗೊಂಡ 42 ಶುದ್ಧ ಕುಡಿಯುವ ನೀರಿನ ಘಟಕಗಳು:
ಜಿಲ್ಲೆಯಲ್ಲಿ ಒಟ್ಟು 677 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ 615 ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, 42 ಶುದ್ಧ ಕುಡಿಯುವ ನೀರಿನ ಘಟಕಗಳು ವಿವಿಧ ಕಾರಣಗಳಿಂದ ಸ್ಥಗಿತಗೊಂಡಿವೆ. ಕೆ.ಆರ್.ಪೇಟೆಯಲ್ಲಿ 83 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪೈಕಿ 3 ನಿಷ್ಕ್ರಿಯಗೊಂಡಿವೆ. ಮದ್ದೂರಲ್ಲಿ 98 ಘಟಕಗಳಿದ್ದು, 2 ಘಟಕಗಳು ಸ್ಥಗಿತಗೊಂಡಿವೆ. ಮಳವಳ್ಳಿಯಲ್ಲಿ ಒಟ್ಟು 88 ಘಟಕಗಳಿದ್ದು, 13 ರಿಪೇರಿಗೆ ಬಂದಿವೆ. ಮಂಡ್ಯ ತಾಲ್ಲೂಕಿನಲ್ಲಿ 165 ನೀರಿನ ಘಟಕಗಳಿದ್ದು, ಅದರಲ್ಲಿ 5 ರಿಪೇರಿಯಾಗಬೇಕಿದೆ. ನಾಗಮಂಗಲದಲ್ಲಿ 87 ಶುದ್ದ ನೀರಿನ ಘಟಕಗಳಿದ್ದು, ಈ ಪೈಕಿ 8 ಘಟಕಗಳು ಸ್ಥಗಿತಗೊಂಡಿವೆ. ಪಾಂಡವಪುರ 81 ಶುದ್ಧ ನೀರಿನ ಘಟಕಗಳಿದ್ದು, 5 ರಿಪೇರಿ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ 75 ಶುದ್ದ ನೀರಿನ ಘಟಕಗಳಿದ್ದು, 6 ಘಟಕಗಳು ಕೆಲಸ ನಿರ್ವಹಿಸುತ್ತಿಲ್ಲ.

Student Drinking Water

ಇದರಲ್ಲಿ ಕೆಲವು ಕಡೆ ಶುದ್ದ ಕುಡಿಯುವ ನೀರಿನ ಕಾಯಿನ್ ಬಾಕ್ಸ್‌ಗಳೇ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕೆಲವು ವಿದ್ಯುತ್ ಸಮಸ್ಯೆ ಹಾಗೂ ತಾಂತ್ರಿಕ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿವೆ.

ಪ್ರತೀ ಸೋಮವಾರ ಕ್ಷೇತ್ರ ಭೇಟಿ ನಡೆಸಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಇನ್ನಿತರೆ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗುವುದು. ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಕಡೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಪೂರೈಸಲಾಗುವುದು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸಿದ್ದತೆ ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಎಂದು ಜಿಪಂ ಸಿಇಓ ಕೆ.ಆರ್.ನಂದಿನಿ ತಿಳಿಸಿದ್ದಾರೆ.

TAGGED:drinking watermandyaRiverssummerಕುಡಿಯುವ ನೀರುನದಿಗಳುಬೇಸಿಗೆಮಂಡ್ಯ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
22 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
28 minutes ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
1 hour ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
2 hours ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
2 hours ago
suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?