Connect with us

Districts

ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ- ಚಾಲಕ ದುರ್ಮರಣ

Published

on

ಹಾಸನ: ಅನಿಲ ತುಂಬಿದ ಟ್ಯಾಂಕರ್ ಮತ್ತು ಕಂಟೇನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಟ್ಯಾಂಕರ್ ಚಾಲಕ ಮೃತಪಟ್ಟ ಘಟನೆ ಸಕಲೇಶಪುರದ ಕೊಲ್ಲಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಡೆದಿದೆ.

ತಮಿಳುನಾಡು ಮೂಲದ ಚಾಲಕ ಮೃತಪಟ್ಟಿದ್ದಾರೆ. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಅಪಘಾತದಿಂದ ಶಿರಾಡಿ ಘಾಟ್ ಸಂಚಾರ ಸ್ಥಗಿತಗೊಂಡಿದ್ದು, ಚಾರ್ಮುಡಿ ಘಾಟ್ ಮುಖಾಂತರ ತೆರಳಲು ಸೂಚಿಸಲಾಗುತ್ತಿದೆ.

ತಡರಾತ್ರಿ 12ಗಂಟೆಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಿಂದ ಕಿ.ಮೀ ಗಟ್ಟಲೆ ವಾಹನಗಳು ಸಾಲು ಗಟ್ಟಿ ನಿಂತಿದೆ. ಹಾಗಾಗಿ ಎಲ್ಲಾ ವಾಹನಗಳು ಹಾಸನದಿಂದ ಬೇಲೂರು ಮಾರ್ಗವಾಗಿ ತೆರಳುತ್ತಿದೆ.

ಈ ಬಗ್ಗೆ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *