Connect with us

Districts

ಮರಕ್ಕೆ ಕಾರು ಡಿಕ್ಕಿ- ವಾಹನದಲ್ಲೇ ಚಾಲಕ ಸಜೀವ ದಹನ

Published

on

ಹಾವೇರಿ: ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸುಟ್ಟು ಭಸ್ಮವಾಗಿ ಚಾಲಕ ಸಜೀವ ದಹನಗೊಂಡ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ತೆರೆದಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನ ದಾವಣಗೆರೆ ಮೂಲದ ಮೃತ್ಯುಂಜಯ ಬಣ್ಣದ(30) ಎಂದು ಗುರುತಿಸಲಾಗಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಈ ಬಗ್ಗೆ ಚಾಲಕನ ಅರವಿಗೆ ಬರುವ ಮೊದಲೇ ಆತ ಬೆಂಕಿ ಜ್ವಾಲೆಯಲ್ಲಿ ಸುಟ್ಟು ಕರಕಲಾಗಿದ್ದಾನೆ.

ದಾರಿಯಲ್ಲಿ ಹೋಗುತ್ತಿದ್ದ ಇತರೇ ವಾಹನದಲ್ಲಿದ್ದ ಪ್ರಯಾಣಿಕರು ಈ ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

www.publictv.in