ಕೋಲಾರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಜೋಡಿಕೃಷ್ಣಪುರ ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಚಾಲಕ ಕೆಟ್ಟು ನಿಂತ ಲಾರಿಯನ್ನು ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಏಕಾಏಕಿ ಚಾಲಕನ ಮೇಲೆ ಹರಿದಿದೆ. ಇದರಿಂದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೂ ಚಾಲಕನ ಗುರುತು ಪತ್ತೆಯಾಗಿಲ್ಲ.
ಅಪಘಾತ ನಡೆದ ಸ್ಥಳಕ್ಕೆ ಸ್ಥಳೀಯ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.