ಚಿಕ್ಕಬಳ್ಳಾಪುರ: ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಟಾಟಾ ಏಸ್ ರಸ್ತೆ ಬದಿ ಹಳ್ಳಕ್ಕೆ ಬಿದ್ದ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಕಾಪುರ ಬಳಿ ನಡೆದಿದೆ.
ಹಿಂದೂಪುರದಿಂದ ಬೆಂಗಳೂರು ಕಡೆಗೆ ಟಾಟಾ ಏಸ್ ತೆರಳುತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ವಾಹನದಲ್ಲಿ ಒಳಗಡೆ ಒದ್ದಾಡುತ್ತಿದ್ದ ಚಾಲಕನನ್ನು ಸ್ಥಳೀಯರು ಗಮನಿಸಿ ವಾಹನದಿಂದ ಹೊರ ತೆಗೆದಿದ್ದಾರೆ.
Advertisement
Advertisement
ಗಂಭೀರ ಗಾಯವಾಗಿ ಮುಳೆ ಮುರಿದು ಹೋಗಿರುವ ಚಾಲಕನನ್ನು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೊಳಗಾದ ಚಾಲಕನ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.
Advertisement
ಈ ಬಗ್ಗೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv