ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ಇಂದು ಮುಂಜಾನೆ ಶರ್ಮಾ ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಗರದ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಈ ಭೀಕರ ರಸ್ತೆ ಅಪಘಾತ ನಡೆದಿದೆ. ಇದನ್ನೂ ಓದಿ: ಪತ್ನಿ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಕೊಂದಿದ್ದ ಪಾಪಿ ಪತಿ ಕೊನೆಗೆ ಶವವಾಗಿ ಪತ್ತೆ
ಖಾಸಗಿ ಬಸ್ ಮುಂಬೈಯಿಂದ ಬೆಂಗಳೂರಿಗೆ ತೆರಳುತ್ತಿದ್ದರೆ, ಕಾರು ಹುಬ್ಬಳ್ಳಿಯಿಂದ ಬೆಳಗಾವಿಗೆ ಹೊರಟಿತ್ತು. ಈ ಮಧ್ಯೆ ಹುಬ್ಬಳ್ಳಿಯ ಹೊರವಲಯದಲ್ಲಿ ಅಪಘಾತ ನಡೆದಿದೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಚಾಲಕನನ್ನು ಹೊರತುಪಡಿಸಿ ಕಾರಿನಲ್ಲಿದ್ದ ಉಳಿದವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಸಂಬಂಧಿಕರ ಮನೆಗೆ ಹೋಗಿ ವಾಪಸ್ ಬರ್ತಿದ್ದವ ಸೇರಿದ್ದು ಮಸಣ
ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.