ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ (Electricity Pole) ಬಸ್ ಡಿಕ್ಕಿ ಹೊಡೆದ ಘಟನೆ ಹಾವೇರಿ (Haveri) ತಾಲೂಕಿನ ಮೇವುಂಡಿ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಿಂದ ರಾಣೇಬೆನ್ನೂರು ಕಡೆಗೆ ಹೊರಟಿತ್ತು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಮಹಾ ಶಿವರಾತ್ರಿ| ಕೋಟಿ ಲಿಂಗಗಳ ಆಲಯವಾಗಿರುವ ಕೋಟಿಲಿಂಗೇಶ್ವರ ದೇವಾಲಯಕ್ಕೆ ನೀವೂ ಭೇಟಿ ನೀಡಿ
Advertisement
Advertisement
ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಉಡುಪಿ: 14ನೇ ಮಹಡಿಯಿಂದ ಬಿದ್ದು ಯುವಕ ಸಾವು
Advertisement