ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು (Car) ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು (Molakalmuru) ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ನಡೆದಿದೆ.
ಯಾದಗಿರಿ ಮೂಲದ ಮೌಲಾ (35), ರೆಹಮಾನ್ (15) ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಬಳ್ಳಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಂಗಳೂರಿಂದ ಯಾದಗಿರಿಗೆ ಕುಟುಂಬದ ಕಾರ್ಯಕ್ರಮಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ವಕ್ಫ್ ಮಸೂದೆಯ ಪರ ಮತ ಹಾಕಿ – ಸಂಸದರಿಗೆ ಕೇರಳ ಕ್ಯಾಥೋಲಿಕ್ ಬಿಷಪ್ ಸಂಘಟನೆ ಕರೆ
ಕಾರು ಪಲ್ಟಿಯಾಗಿರುವ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ರಾಂಪುರ ಪಿಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪತ್ನಿಯಿಂದ ಪತಿಯ ವಾಟ್ಸಪ್ ಹ್ಯಾಕ್ – ಪರ ಸ್ತ್ರೀಯರೊಂದಿಗೆ ರಾಸಲೀಲೆ ನೋಡಿ ಶಾಕ್