ಗಾಂಧೀನಗರ: ನಿನ್ನೆ ತಡರಾತ್ರಿ ಗುಜರಾತ್‌ನ (Gujarat) ನವಸಾರಿ ಜಿಲ್ಲೆಯಲ್ಲಿ ಭೀಕರ ಅಪಘಾತ (Accident) ಸಂಭವಿಸಿದ್ದು, ಘಟನೆಯಲ್ಲಿ 9 ಜನರು ಸಾವನ್ನಪ್ಪಿ 28 ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೂರತ್‌ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ ವೇಳೆ ಟೊಯೊಟಾ ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೂ ಮುನ್ನ ಚಾಲಕನಿಗೆ ಹೃದಯಾಘಾತವಾಗಿದ್ದು, ಇದರಿಂದ ವಾಹನದ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟಿಕೆಟ್‍ಗಾಗಿ ಕಾಂಗ್ರೆಸ್ ಕಾರ್ಯಕರ್ತರ ಸಮರ- ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭುಗಿಲೆದ್ದ ಆಕ್ರೋಶ
ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿದ್ದ 28 ಜನರು ಗಾಯಗೊಂಡಿದ್ದಾರೆ. 11 ಜನ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಬಳಿಕ ಪೊಲೀಸರು ಕ್ರೇನ್ ಬಳಸಿ ಬಸ್ ಅನ್ನು ರಸ್ತೆಯಿಂದ ತೆರವುಗೊಳಿಸಿದ್ದಾರೆ. ಬಳಿಕ ಸಂಚಾರ ಎಂದಿನಂತೆ ಪುನರಾರಂಭವಾಗಿದೆ. ಇದನ್ನೂ ಓದಿ: ನಾವು ಕೂಗಾಡಿದ್ರೂ ಸಹಾಯಕ್ಕೆ ಯಾರೊಬ್ಬರೂ ಬರಲಿಲ್ಲ- ಪಂತ್ ರಕ್ಷಿಸಿದ ಬಸ್ ಡ್ರೈವರ್ ಬಿಚ್ಚಿಟ್ಟ ಸತ್ಯ