ತಿರುವನಂತಪುರಂ: ಗೂಗಲ್ ಮ್ಯಾಪ್ ಆಧಾರದ ಮೇಲೆ ನಾವು ಕೆಲವು ಸ್ಥಳ ಇರುವ ಜಾಗವನ್ನು ಪತ್ತೆ ಮಾಡಿ ಹೋಗುತ್ತೇವೆ. ಆದರೆ ಹೀಗೆ ಗೂಗಲ್ ಮ್ಯಾಪ್ ಬಳಸುತ್ತಾ ಕಾರ್ ಚಾಲಕ 3 ಮಂದಿಯ ಸಾವಿಗೆ ಕಾರಣನಾಗಿದ್ದಾನೆ.
ಶ್ರೀಜಾ(45), ಶಕುಂತಲಾ(51), ಇಂದಿರಾ(57) ಮೃತರಾಗಿದ್ದಾರೆ. ಗೂಗಲ್ ಮ್ಯಾಪ್ ಬಳಸಿ ಕಾರ್ ಚಾಲನೆ ಮಾಡುತ್ತಿದ್ದ. ಚಾಲಕನ ನಿಯಂತ್ರಣ ತಪ್ಪಿ ಕಾಲುವೆ ಬಿದ್ದು ಮೂವರು ಮೃತಪಟ್ಟಿದ್ದಾರೆ.
Advertisement
Advertisement
ನಡೆದಿದ್ದೇನು?: 7 ಮಂದಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕಾರೊಂದು ಕೇರಳದ ಅಡೂರ್ ಬೈಪಾಸ್ ಬಳಿ ಕಾಲುವೆಗೆ ಬಿದ್ದು, ಮೂವರು ಮೃತಪಟ್ಟಿದ್ದಾರೆ. ಕಾರ್ ಚಾಲಕನಿಗೆ ಹೋಗುತ್ತಿದ್ದ ದಾರಿಯ ಪರಿಚಯವಿರಲಿಲ್ಲ. ಹೀಗಾಗಿ ಆತ ಗೂಗಲ್ ಮ್ಯಾಪ್ ಬಳಸುತ್ತಿದ್ದನು. ಮ್ಯಾಪ್ ತೋರಿದ ದಾರಿಯನ್ನೇ ಅನುಸರಿಸುತ್ತಾ ಕಾರ್ ಚಾಲನೆ ಮಾಡುತ್ತಿದ್ದ. ಚಾಲಕ ದಾರಿ ತಪ್ಪಿತ್ತು ಎಂದು ತಿಳಿದಾಗ ಗಾಬರಿಗೊಂಡು ಕಾರನ್ನ ಕಾಲುವೆಗೆ ಇಳಿಸಿದ್ದಾನೆ.
Advertisement
Advertisement
ಕಾಲುವೆಯಲ್ಲಿ ನೀರು ಹೆಚ್ಚಾಗಿ ಹರಿಯುತ್ತಿದ್ದ ಕಾರಣ ಕಾರು ಕೊಚ್ಚಿ ಹೋಗಿ ಸಂಪೂರ್ಣವಾಗಿ ಮುಳುಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರೊಡನೆ ಸೇರಿ ನಾಲ್ವರನ್ನು ರಕ್ಷಣೆ ಮಾಡಿದ್ದು, ಉಳಿದ ಮೂವರು ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ. ಇದನ್ನೂ ಓದಿ: ಹಿಜಬ್- ಕೇಸರಿ ಶಾಲು ವಿವಾದ- ಹೋರಾಟಕ್ಕಾಗಿಯೇ ವಿದ್ಯಾರ್ಥಿಗಳು ಟ್ವಿಟ್ಟರ್ ಖಾತೆ ಓಪನ್..!
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾರು ವೇಗವಾಗಿ ಹೋಗುತ್ತಿತ್ತು. ಗೂಗಲ್ ಮ್ಯಾಪ್‍ನಂತೆ ಆಡೂರ್ ಬೈಪಾಸ್‍ನಲ್ಲಿ ಕಾರು ಚಾಲಕ ಎಡ ತಿರುವು ತೆಗೆದುಕೊಂಡಿದ್ದಾನೆ. ತಕ್ಷಣವೇ ತಪ್ಪು ದಾರಿಯಲ್ಲ ಹೋಗುತ್ತಿದ್ದೇವೆ ಎಂದು ಚಾಲಕ ಬ್ರೇಕ್ ಹಾಕುವ ಬದಲು ಕಾರಿನ ಆಕ್ಸಿಲೇಟರ್ ತುಳಿದಿದ್ದಾನೆ. ಬಳಿಕ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಯಲ್ಲಿ ಬಿದ್ದಿದೆ ಎಂದು ಗಾಯಾಳು ಒಬ್ಬರು ಹೇಳಿದ್ದಾರೆ.