ಬೀದರ್: ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಭಾಗದಲ್ಲಿ ಮಳೆ ಪ್ರಾರಂಭವಾಗಿದ್ದು, ಈ ಎಫೆಕ್ಟ್ ಗಡಿ ಜಿಲ್ಲೆ ಬೀದರ್‌ಗೂ ತಟ್ಟಿದೆ.
ಜಿಲ್ಲೆಯಲ್ಲಿ ಬೆಳಗ್ಗಿನಿಂದಲೂ ತುಂತುರು ಮಳೆ ಪ್ರಾರಂಭವಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಒಂದು ಕಡೆ ತುಂತುರು ಮಳೆ ಮೊತ್ತೊಂದು ಕಡೆ ಅತಿ ಚಳಿಗೆ ಜಿಲ್ಲೆಯ ಜನರು ಕಂಗಾಲಾಗಿದ್ದು, ಮನೆಯಿಂದ ಹೊರಗೆ ಬರಲು ಜನರು ಯೋಚನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ವಾಯುಭಾರ ಕುಸಿತ ಎಫೆಕ್ಟ್ ನಿಂದಾಗಿ ಜಿಲ್ಲೆಯ ಜನರು ಸರ್ಕಾರಿ ಕೆಲಸಕ್ಕೆ ಹಾಗೂ ಯಾವುದೇ ಖಾಸಗಿ ಕೆಲಸಕ್ಕೂ ಹೊರಗಡೆ ಹೋಗಬೇಕಾದರೂ ಹಿಂದೇಟು ಹಾಕುತ್ತಿದ್ದಾರೆ.
ವಾಯುಭಾರ ಕುಸಿತದಿಂದಾಗಿ ಇನ್ನು ಎರಡು ಮೂರು ಮೂರು ದಿನಗಳ ಕಾಲ ಸತತವಾಗಿ ತುಂತುರು ಮಳೆ ಜಿಲ್ಲೆಯಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜನರು ಇನ್ನು ಮೂರು ದಿನಗಳ ಕಾಲ ಮನೆಯಿಂದ ಹೊರಗೆ ಬರುವುದು ಕಷ್ಟ ಸಾಧ್ಯವಾಗಿದೆ.