ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ (Gopalswami Hills And Temple) ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಕ್ಯಾಮೆರಾ ಚಿತ್ರೀಕರಣ ಮತ್ತು ಡೋನ್ (Drone) ಮೂಲಕ ಚಿತ್ರೀಕರಣ ನಡೆಸುವುದಕ್ಕೆ ನಿಷೇಧ ಹೇರಿ ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದಾರೆ.
ಬಂಡೀಪುರದ ಜಿ.ಎಸ್.ಬೆಟ್ಟ ವಲಯದ ಅರಣ್ಯಾಧಿಕಾರಿಗಳು ತಹಶೀಲ್ದಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅವರು ಕ್ಯಾಮೆರಾ (Camera) ಹಾಗೂ ಡ್ರೋನ್ ಕ್ಯಾಮೆರಾ ಮೂಲಕ ಚಿತ್ರೀಕರಣ ಮಾಡುವುದಕ್ಕೆ ನಿಷೇಧ ಹೇರಿದ್ದಾರೆ. ಇದನ್ನೂ ಓದಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ ಸೂಚಿಸಿದೆ: ದಿನೇಶ್ ಗುಂಡೂರಾವ್
Advertisement
Advertisement
ಇತ್ತೀಚೆಗೆ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿರುವ ದೇವಸ್ಥಾನಕ್ಕೆ ಅತಿ ಹೆಚ್ಚು ಭಕ್ತರು, ಪ್ರವಾಸಿಗರು, ಭೇಟಿ ನೀಡುತ್ತಿದ್ದಾರೆ. ಸಂಜೆ ವೇಳೆಗೆ ದೇವಾಲಯದ ಹತ್ತಿರ ಬರುವ ಕಾಡಾನೆಯ ಬಳಿ ಪ್ರವಾಸಿಗರು ತೆರಳಿ ಛಾಯಾಚಿತ್ರ ತೆಗೆಯುವುದು, ಸೆಲ್ಫಿ ತೆಗೆದು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದು ಮಾಡುತ್ತಿದ್ದಾರೆ. ಇದರು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಧರ್ಮದ ಕವಚದ ಒಳಗೆ ಪಾಪ, ಅನ್ಯಾಯದ ಕೆಲಸ ಬಿಜೆಪಿ ಮಾಡುತ್ತಿದೆ: ದಿನೇಶ್ ಗುಂಡೂರಾವ್
Advertisement
Advertisement
ಅಲ್ಲದೇ ಆನೆಗಳಿಂದ ಸಾರ್ವಜನಿಕರಿಗೆ ಮತ್ತು ಸಾರ್ವಜನಿಕರಿಂದ ಆನೆಗಳಿಗೂ ತೊಂದರೆಯಾಗಬಹುದು. ಹಾಗಾಗಿ ವಲಯ ಅರಣ್ಯಾಧಿಕಾರಿಗಳ ಮನವಿ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ದೇವಾಲಯದ ಸುತ್ತಮುತ್ತ ಕ್ಯಾಮೆರಾ ಮತ್ತು ಡ್ರೋನ್ ಕ್ಯಾಮೆರಾಗಳ ಮೂಲಕ ಚಿತ್ರೀಕರಣ ಮಾಡುವುದನ್ನ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಹುಳುಕುಗಳು ಶ್ವೇತಪತ್ರದಲ್ಲಿ ಬಯಲು; ಯುಪಿಎ ಅವಧಿ ಕಿಕ್‌ಬ್ಯಾಕ್, ಹಗರಣಗಳ ಕಾಲ: ಅಶ್ವಥ್ ನಾರಾಯಣ್