ದುಬೈ: ಅಬುಧಾಬಿ ವಿಮಾನ ನಿಲ್ದಾಣದಲ್ಲಿರುವ ಸೌದಿ ಅರಾಮ್ಕೋ ತೈಲ ಸಂಗ್ರಹಾರದದ ಮೇಲೆ ಡ್ರೋನ್ ದಾಳಿ ನಡೆದಿದ್ದು ಮೂವರು ಸಾವನ್ನಪ್ಪಿ, 6 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಈ ದಾಳಿಯಲ್ಲಿ ಇಬ್ಬರು ಭಾರತಿಯರು ಹಾಗೂ ಒಬ್ಬ ಪಾಕಿಸ್ತಾನಿ ಪ್ರಜೆ ಸಾವನ್ನಪ್ಪಿದ್ದು, 6 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಬುಧಾಬಿಯ ರಾಷ್ಟ್ರೀಯ ತೈಲ ಸಂಸ್ಥೆಯ ಶೇಖರಣಾ ಸೌಲಭ್ಯಗಳ ಸಮೀಪವಿರುವ ಕೈಗಾರಿಕಾ ಮುಸಾಫಾ ಪ್ರದೇಶದಲ್ಲಿ ಮೂರು ಇಂಧನ ಟ್ಯಾಂಕರ್ ಟ್ರಕ್‍ಗಳು ಸ್ಫೋಟಗೊಂಡಿವೆ ಹಾಗೂ ಅಬುಧಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತನಿಖೆಗಳ ಪ್ರಕಾರ ಸ್ಫೋಟ ಹಾಗೂ ಬೆಂಕಿ ಕಾಣಿಸಿಕೊಂಡ ಎರಡೂ ಸ್ಥಳಗಳಲ್ಲಿ ಡ್ರೋನ್‍ನ ಭಾಗಗಳು ಕಂಡುಬಂದಿವೆ. ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದರು. ಇದನ್ನೂ ಓದಿ: ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
Update: Smoke seen in #AbuDhabi following suspected #Houthi drone attack on three oil tankers. pic.twitter.com/IS44EJAGeU
— Al Bawaba News (@AlBawabaEnglish) January 17, 2022
ಇರಾನ್ 2019ರಲ್ಲಿ ಯೆಮೆನ್‍ನಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಹೆಚ್ಚಾಗಿ ಕಡಿಮೆಗೊಳಿಸಿತ್ತು. ಆದರೆ ಅದು ಸಶಸ್ತ್ರ ಮತ್ತು ತರಬೇತಿ ಪಡೆದ ಯೆಮೆನ್ ಪಡೆಗಳನ್ನು ತನ್ನ ಹಿಡಿತದಲ್ಲೇ ಇಟ್ಟುಕೊಂಡಿದೆ. ಇದರಿಂದಾಗಿ ಇರಾನ್ ಬೆಂಬಲಿತ ಯೆಮೆನ್‍ನ ಹೌತಿ ಪಡೆಗಳು ಸೌದಿ ಅರಾಮ್ಕೊದ ಘಟಕದ ಮೇಲೆ ದಾಳಿ ನಡೆಸಿದೆ. ಇದನ್ನೂ ಓದಿ: ವಸತಿ ಶಾಲೆಗಳಿಂದ ಮಕ್ಕಳನ್ನು ಕರೆದೊಯ್ಯುತ್ತಿದ್ದಾರೆ ಪೋಷಕರು
جماعة الحـ ـوثي في #اليمن تقصف #أبوظبي.
Yemen’deki El Husi grubu #AbuDabi‘ya İHAlarla saldırıları düzenliyor. pic.twitter.com/ERLnD3rmvL
— الرادع التركي ???????? (@RD_turk) January 17, 2022
ವಿಶ್ವದ ಅತಿ ದೊಡ್ಡ ತೈಲ ಕಂಪನಿ ಸೌದಿ ಅರಾಮ್ಕೋ ಮೇಲೆ ಡ್ರೋನ್ ದಾಳಿ ನಡೆಯುತ್ತಿರುವುದು ಇದು ಮೊದಲೆನಲ್ಲ. ಈ ಹಿಂದೆ ಸೌದಿ ರೇಬಿಯಾದ ಅಬ್ಕೈಕ್ ಮತ್ತು ಖುರೈಸ್‍ನಲ್ಲಿದ್ದ ಸೌದಿ ಅರಾಮ್ಕೋದ ತೈಲ ಘಟಕದ ಮೇಲೆ ಮೇಲೆ ದಾಳಿ ನಡೆಸಲಾಗಿತ್ತು. ಈಗ ಮತ್ತೊಮ್ಮೆ ಹೌತಿ ಪಡೆಗಳು ದಾಳಿ ನಡೆಸಿತ್ತು.