ನವದೆಹಲಿ: ಮುಂದಿನ 4 ವರ್ಷಗಳಲ್ಲಿ 15 ಸಾವಿರ ಮಹಿಳಾ ಸ್ವಸಹಾಯ ಗುಂಪುಗಳಿಗೆ (Women Self Help Group) ಡ್ರೋನ್ (Drone) ನೀಡುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ. 2023-2024 ಮತ್ತು 2025-2026ರ ಅವಧಿಯಲ್ಲಿ ಡ್ರೋನ್ ವಿತರಿಸಲಿದ್ದು ಕೃಷಿ ಚಟುವಟಿಕೆಗಳಿಗೆ ಬಾಡಿಗೆ ನೀಡುವ ಮೂಲಕ ಆರ್ಥಿಕ ಸ್ವಾವಲಂಬನೆಗೆ ಮತ್ತೊಂದು ಅವಕಾಶ ಕಲ್ಪಿಸಲಾಗುತ್ತಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಅನುರಾಗ್ ಠಾಕೂರ್, ಸರ್ಕಾರವೂ ಡ್ರೋನ್ ಖರೀದಿಗೆ 80% ಹಣ ಅಥಾವ 8 ಲಕ್ಷದ ಗರಿಷ್ಠ ನೆರವು ನೀಡಲಿದೆ. ಮುಂದಿನ 4 ವರ್ಷದ ಯೋಜನೆಗೆ ಸರ್ಕಾರವು 1,261 ಕೋಟಿ ರೂ. ಹಣ ಮೀಸಲಿಡಲಿದೆ ಎಂದು ತಿಳಿಸಿದರು.
Advertisement
Advertisement
ಕೃಷಿ ಚಟುವಟಿಗಳಲ್ಲಿ ಡ್ರೋನ್ ಬಳಕೆ ಹೆಚ್ಚುತ್ತಿದೆ. ರಸಗೊಬ್ಬರಗಳ ಸಿಂಪಡಣೆ ಡ್ರೋನ್ ಮೂಲಕ ಮಾಡಲಾಗುತ್ತಿದೆ. ದೇಶದಲ್ಲಿ ಹತ್ತು ಕೋಟಿ ಮಹಿಳೆಯರು ಸ್ವಸಹಾಯ ಗುಂಪುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಇವರಿಗೆ ಲಕ್‌ಪತಿ ದೀದಿ ಯೋಜನೆಯಡಿ ಡ್ರೋನ್ ನೀಡುವ ಮೂಲಕ ಕೃಷಿ ವಲಯದಲ್ಲಿ ಕ್ರಾಂತಿ ಮಾಡುವ ಉದ್ದೇಶ ಹೊಂದಲಾಗಿದೆ. ಡ್ರೋನ್ ಚಾಲನೆಗೆ 5 ದಿನ ತರಬೇತಿ ನೀಡಲಾಗುವುದು. ರಸಗೊಬ್ಬರ ಸಿಂಪಪಡೆಗೆ 10 ದಿನಗಳ ತರಬೇತಿ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದು ನಿಷೇಧಿಸಲು ಮನವಿ- ಅರ್ಜಿದಾರರಿಗೆ ಹೈಕೋರ್ಟ್ ತರಾಟೆ
Advertisement
Advertisement
ಇದೇ ವೇಳೆ ಮುಂದಿನ 5 ವರ್ಷಗಳ ಕಾಲ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ ಮಾಡಲು ಸಂಪುಟದಲ್ಲಿ ನಿರ್ಧರಿಸಿದೆ. ಬಡ ಕುಟುಂಬಗಳಿಗೆ ತಿಂಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ ನೀಡುವುದು, ಅಂತ್ಯೋದಯ ಕುಟುಂಬಗಳಿಗೆ ತಿಂಗಳಿಗೆ 35 ಕೆಜಿ ಉಚಿತ ಆಹಾರ ಧಾನ್ಯಗಳು ನೀಡುವ ಯೋಜನೆಯಾಗಿದ್ದು, ಸುಮಾರು 81 ಕೋಟಿ ಜನರು ಪ್ರಯೋಜನ ಪಡೆಯಲಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಯೋಜನೆಗೆ ಸರ್ಕಾರ ಒಟ್ಟು 11.80 ಲಕ್ಷ ಕೋಟಿ ರೂ. ಖರ್ಚು ಮಾಡಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಹೇಳಿದರು. ಇದನ್ನೂ ಓದಿ: ಹಾರಾಟದಲ್ಲಿದ್ದ ವಿಮಾನದಲ್ಲೇ ಗಂಡ, ಹೆಂಡತಿ ಗಲಾಟೆ – ಬ್ಯಾಂಕಾಕ್‍ಗೆ ಹೊರಟಿದ್ದ ವಿಮಾನ ದೆಹಲಿಯಲ್ಲಿ ಲ್ಯಾಂಡ್