ಬೆಂಗಳೂರು: ಕೇಂದ್ರ ಸರ್ಕಾರ (Central Government) ರಾಜ್ಯದ ಗ್ರಾಮಗಳ ಜನ ವಸತಿ ಪ್ರದೇಶಗಳ ಆಸ್ತಿಗಳನ್ನು ಅಳತೆ ಮಾಡಿ ಹಕ್ಕು ದಾಖಲೆ ವಿತರಿಸುವ ಉದ್ದೇಶದಿಂದ ಸ್ವಮಿತ್ವ ಯೋಜನೆ ಜಾರಿಗೊಳಿಸಿದ್ದು, ಅದರಂತೆ ಗ್ರಾಮ ಠಾಣಾಗಳ ಸರ್ವೆ ಕಾರ್ಯ ನಡೆಸಿ ಪಿ.ಆರ್.ಕಾರ್ಡ್ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ (R Ashok) ತಿಳಿಸಿದ್ದಾರೆ.
Advertisement
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ (BJP) ಸದಸ್ಯ ವೈ.ಎಂ ಸತೀಶ್ ಪರ ಡಿಎಸ್ ಅರುಣ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಗ್ರಾಮಠಾಣಾ ಪ್ರದೇಶ ಗುರುತಿಸುವುದು ಬಹಳ ವಿಶಿಷ್ಟ. ಮೊದಲು ಬ್ರಿಟಿಷರ ಕಾಲದಲ್ಲಿ ಹಳೆ ಮೈಸೂರಿನಲ್ಲಿ, ಮುಂಬೈ (Mumbai) ಪ್ರಾಂತ್ಯದಲ್ಲಿ, ಮದರಾಸು ಪ್ರಾಂತ್ಯದಲ್ಲಿ, ಹೈದರಾಬಾದ್ (Hyderabad) ಪ್ರಾಂತ್ಯ, ಕೊಡಗು ಪ್ರಾಂತ್ಯದಲ್ಲಿ ಸರ್ವೆ ನಡೆದು ಶತಮಾನದ ಹಿಂದ ಮತ್ತೆ ರೀ ಸರ್ವೆ ಮಾಡಲಾಗಿದೆ. ಈಗ ಶತಮಾನದ ನಂತರ ನಾವು ಗ್ರಾಮಠಾಣಾ ಸರ್ವೆ ಕಾರ್ಯ ನಡೆಸಲಾಗುತ್ತಿದೆ ಎಂದರು.
Advertisement
Advertisement
ಕೇಂದ್ರದ ಸ್ವಮಿತ್ವ ಯೋಜನೆಯಡಿ ಸರ್ವೆ ಕಾರ್ಯ ನಡೆಸಲಾಗುತ್ತಿದೆ. 10 ಮನೆ ಇದ್ದರು ಗ್ರಾಮಠಾಣಾ ಮಾಡಲು ಆದೇಶಿಸಲಾಗಿದೆ. 3,191 ಗ್ರಾಮಗಳಲ್ಲಿ ಡ್ರೋಣ್ ಸರ್ವೆ ಮಾಡಲಾಗಿದೆ. ಇದರಲ್ಲಿ 2,467 ಗ್ರಾಮಗಳ 8.02 ಲಕ್ಷ ಕರಡು ಪಿ.ಆರ್ ಕಾರ್ಡ್ ವಿತರಿಸಲಾಗಿದೆ ಎಂದರು. ಇದನ್ನೂ ಓದಿ: ಇದುವರೆಗೂ 38 ಮಂದಿ ಮೆಟ್ರೋ ಅವಘಡಕ್ಕೆ ಬಲಿಯಾಗಿದ್ದಾರೆ: ಸಿಎಂ
Advertisement
ನೂರು ವರ್ಷದ ನಂತರ ಈಗ ಮತ್ತೆ ಸರ್ವೆ ಮಾಡಲಾಗುತ್ತಿದೆ. ಡ್ರೋಣ್ ಸರ್ವೆ ನಿಖರವಾಗಿ ದಾಖಲಾಗುತ್ತಿದೆ. ಆದಷ್ಟು ಬೇಗ ಎಲ್ಲ ಭಾಗದಲ್ಲಿಯೂ ಸರ್ವೆ ಕಾರ್ಯ ಮುಗಿಸಲಾಗುತ್ತದೆ ಎಂದು ಭರವಸೆ ನೀಡಿದರು.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k