ಡಿಸ್ಪುರ್: ಎಲ್ಲೆಡೆ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ನೀಡುವ ಹಾಗೂ ಕಫ್ರ್ಯೂ ನಿಯಮಗಳ ಬಗ್ಗೆ ಕೇಳಿಬರುತ್ತಿದೆ. ಆದರೆ ಅಸ್ಸಾಂನ ಬಿಸ್ವಂತ್ ಜಿಲ್ಲೆಯಲ್ಲಿ ಮಾತ್ರ ಹೊಸ ವರ್ಷಾಚರಣೆಗೆ ಉತ್ತೇಜನ ನೀಡುತ್ತಿದ್ದು, ಕುಡುಕರಿಗೆ ಹೊಸದೊಂದು ಸೌಲಭ್ಯವನ್ನೂ ಒದಗಿಸುತ್ತಿದೆ.
ಡ್ರಂಕ್ ಆಂಡ್ ಡ್ರೈವ್ ನಿಂದಾಗುವ ಅಪಘಾತಗಳನ್ನು ತಪ್ಪಿಸಲು ಅಸ್ಸಾಂನ ಬಿಸ್ವಂತ್ ಜಿಲ್ಲಾಡಳಿತ ಎರಡು ಸಹಾಯವಾಣಿಯನ್ನು ಸ್ಥಾಪಿಸಿದೆ. ಹೊಸವರ್ಷದಲ್ಲಿ ಮದ್ಯಪಾನ ಮಾಡಿದವರನ್ನು ಮನೆಗೆ ಬಿಡಲು ಈ ಸೌಲಭ್ಯ ಬಳಸಿಕೊಳ್ಳಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.
Advertisement
Advertisement
ಕುಡಿತದ ಅಮಲಿನಲ್ಲಿ ಸಂಭವಿಸುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಈ ಯೋಜನೆ ಮಾಡಲಾಗಿದೆ. ಹೊಸ ವರ್ಷದ ಕಾರ್ಯಕ್ರಮದಿಂದ ಕುಡುಕರನ್ನು ಅವರ ಮನೆಗಳಿಗೆ ಬಿಡಲು ಈ ಸಹಾಯವಾಣಿ ಕಾರ್ಯನಿರ್ವಹಿಸಲಿದೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆ ತಡೆಗೆ ಮತ್ತಷ್ಟು ಟಫ್ ರೂಲ್ಸ್ – ಹೋಟೆಲ್, ರೆಸ್ಟೋರೆಂಟ್‍ಗಳಲ್ಲಿ 50:50 ರೂಲ್ಸ್ ಜಾರಿ
Advertisement
ಅತಿಯಾದ ಮದ್ಯ ಸೇವನೆಯಿಂದ ಅಪಘಾತ ಸಂಭವಿಸಬಹುದು ಎಂದು ಭಾವಿಸುವ ಜನರು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ಡ್ರಾಪ್ ಹೋಮ್ ಸೇವೆಯನ್ನು ಪಡೆಯಬಹುದು. ಇದಕ್ಕಾಗಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 10 ವಾಹನಗಳನ್ನು ನಿಯೋಜಿಸಲಾಗಿದೆ. ಡಿಸೆಂಬರ್ 31ರಂದು ಈ ಸೌಲಭ್ಯ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Advertisement
ಬಿಸ್ವಂತ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ಲೀನಾ ಡೋಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಡಿಸೆಂಬರ್ 31ರಂದು ರಾತ್ರಿ ಹೊಸ ವರ್ಷವನ್ನು ಆಚರಿಸಲು ಪ್ರತಿಯೊಬ್ಬರಿಗೂ ಹಕ್ಕಿದೆ. ಆಚರಣೆಯ ಸಮಯದಲ್ಲಿ ಯಾರಾದರೂ ಕುಡಿದು ಮನೆಗೆ ಹಿಂದಿರುಗಲು ಸಾಧ್ಯವಾಗದಿದ್ದರೆ ಅಂತಹವರಿಗೆ ಜಿಲ್ಲಾಡಳಿತ ನೆರವಿನೊಂದಿಗೆ ಪೊಲೀಸ್ ಇಲಾಖೆ ವಾಹನ ವ್ಯವಸ್ಥೆ ಮಾಡಿದೆ ಎಂದರು. ಇದನ್ನೂ ಓದಿ: ಜನಸಂಪರ್ಕ ಬೆಳೆಸಿಕೊಳ್ಳಿ – ಜಿ.ಪಂ. ಸಿಇಓಗಳಿಗೆ ಬೊಮ್ಮಾಯಿ ಸಲಹೆ
ಈ ಉದ್ದೇಶಕ್ಕಾಗಿ ಸ್ಥಾಪಿಸಲಾದ ಎರಡು ಸಹಾಯವಾಣಿ ಸಂಖ್ಯೆಗಳನ್ನು ಕೂಡ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸೇವೆ ಅಸ್ಸಾಂನ ಬಿಸ್ವಂತ್ ಜಿಲ್ಲೆಗೆ ಮಾತ್ರ ಅನ್ವಯವಾಗುತ್ತದೆ.