ಮೈಸೂರು: ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ ಸಚಿವ ಸಂಪುಟ ಉಪಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದೆ. ಸಭೆಯ ಬಳಿಕ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.
ಮೈಸೂರಿನ (Mysuru) ಸರ್ಕಾರಿ ಭವನದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಮೋಡ ಬಿತ್ತನೆ ಇಂದಿನವರೆಗೂ ಎಲ್ಲಿಯೂ ಯಶಸ್ವಿಯಾಗಿಲ್ಲ. ಬರಗಾಲ ಘೋಷಣೆಯಾದ ಮೇಲೆ ಕೇಂದ್ರ ಸರ್ಕಾರದವರಿಗೆ ತಿಳಿಸಲಾಗುತ್ತದೆ. ಕೇಂದ್ರ ಸರ್ಕಾರ ಪರಿಶೀಲಿಸಿದ ನಂತರ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ನೆರವು ನೀಡುತ್ತಾರೆ. ಬರಗಾಲ ಎಂದು ಘೋಷಣೆಯಾದ ನಂತರ ಆ ತಾಲ್ಲೂಕುಗಳಲ್ಲಿ ಬರ ಪರಿಹಾರವಾಗಿ ಜನರಿಗೆ ಕೆಲಸ, ಮುಂತಾದ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಹಿರಿಯ ನಟ ದಿ.ಎನ್.ಟಿ.ರಾಮರಾವ್ ಸ್ಮರಣಾರ್ಥ 100 ರೂಪಾಯಿ ನಾಣ್ಯ ರಿಲೀಸ್
Advertisement
Advertisement
ಕೆ.ಆರ್.ಆಸ್ಪತ್ರೆಯಲ್ಲಿ ಸುಟ್ಟಗಾಯಗಳಿಗೆ ಚಿಕಿತ್ಸೆ ನೀಡುವ ಬರ್ನ್ ವಾರ್ಡ್ ಉದ್ಘಾಟನೆ ನಡೆಯಲಿದೆ. ಆ.30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 3 ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ನಾಲ್ಕನೇ ಗ್ಯಾರಂಟಿಯನ್ನು ಜಾರಿ ಮಾಡಲಿದ್ದೇವೆ. ಈ ಕಾರ್ಯಕ್ರಮಕ್ಕೆ ಒಂದು ಲಕ್ಷ ಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿಯವರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Advertisement
Advertisement
ಗೃಹಲಕ್ಷ್ಮೀ (Gruha Lakshmi) ದೇಶದಲ್ಲಿಯೇ ದೊಡ್ಡ ಕಾರ್ಯಕ್ರಮವಾಗಿದೆ. ವರ್ಷದಲ್ಲಿ ಸುಮಾರು 32 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಈ ವರ್ಷ ಸುಮಾರು 18 ಸಾವಿರ ಕೋಟಿ ರೂ.ಗಳು ವೆಚ್ಚವಾಗಲಿದೆ. 1.33 ಕೋಟಿ ಲಕ್ಷ ಕುಟುಂಬಗಳ ಯಜಮಾನಿಗೆ 2000 ರೂ. ನೀಡಲಾಗುತ್ತಿದೆ. ಒಂದು ತಿಂಗಳಿಗೆ 4-5 ಸಾವಿರ ರೂ.ಗಳು ಒಂದು ಕುಟುಂಬಕ್ಕೆ ದೊರೆಯಲಿದೆ. ಇದರಿಂದ ಅವರ ಕೊಂಡುಕೊಳ್ಳುವ ಸಾಮಥ್ರ್ಯ ಹೆಚ್ಚುತ್ತದೆ. ಅವರ ಕೈಯಲ್ಲಿ ಹಣ ಇರುವುದರಿಂದ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಎಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಿರುತ್ತದೆಯೋ ಅಲ್ಲಿ ಜಿಡಿಪಿ ಕೂಡ ಬೆಳವಣಿಗೆ ಆಗುತ್ತದೆ. ಉದ್ಯೋಗ ಕೂಡ ಸೃಷ್ಟಿ ಆಗುತ್ತದೆ ಎಂದಿದ್ದಾರೆ.
ಬೆಳಗಾವಿಯಿಂದ ಕಾರ್ಯಕ್ರಮ ಮೈಸೂರಿಗೆ ಸ್ಥಳಾಂತರವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಲ್ಲಾ ಜಿಲ್ಲೆಗಳಲ್ಲಿಯೂ ಕಾರ್ಯಕ್ರಮ ಜಾರಿಯಾಗಲಿದೆ. ಮೂರು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದು, ಇಂದು ಕೆಡಿಪಿ ಸಭೆ ನಡೆಸಿದ್ದೇನೆ. ನಾಳೆ ಸುತ್ತೂರು ಮಠ ಹಾಗೂ ಸಿದ್ದಲಿಂಗಪುರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ಅಲ್ಲದೇ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ನಾಲ್ಕು ಜಿಲ್ಲೆಗಳು ಸೇರಿ ಕಾರ್ಯಕ್ರಮಗಳನ್ನು ಆಯೋಜಿಸಿದೆ ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: INDIA ಒಕ್ಕೂಟಕ್ಕೆ ಅಶೋಕ ಚಕ್ರವಿಲ್ಲದ ತ್ರಿವರ್ಣ ಧ್ವಜ ಬಳಕೆಗೆ ಚಿಂತನೆ
Web Stories