ಮಂಡ್ಯ: ಮಂಡ್ಯದ ಕಂಪು ಖ್ಯಾತಿಯ ಅಚ್ಚ ಬೆಲ್ಲ (Jaggery) ಈಗ ಅಕ್ಷರಶಃ ಬಂಗಾರವಾಗಿದೆ. ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರಗಾಲದ ಛಾಯೆ ಕಾವೇರಿ ನಾಡಿನ ರೈತರನ್ನು ಹೈರಾಣಾಗಿಸಿದ್ದು, ಇದರ ನೇರ ಬಿಸಿ ಈಗ ಮಾರುಕಟ್ಟೆಯಲ್ಲಿ ಬೆಲ್ಲದ ಬೆಲೆ ಮೇಲೆ ತಟ್ಟಿದೆ. ಇತಿಹಾಸದಲ್ಲೇ ಎಂದೂ ಕಾಣದ ರೀತಿಯಲ್ಲಿ ಮಂಡ್ಯದ ಬೆಲ್ಲದ ದರ ದಾಖಲೆಯ ಏರಿಕೆ ಕಂಡಿದೆ.
ಬೆಲೆ ಜಿಗಿತ:
ಈ ಹಿಂದೆ ಕ್ವಿಂಟಾಲ್‌ಗೆ 4,500 ರೂ. ಇದ್ದ ಬೆಲ್ಲದ ದರ, ಕಳೆದ ಎರಡಮೂರು ದಿನಗಳಲ್ಲಿ ಬರೋಬ್ಬರಿ 2,000 ರೂ. ಏರಿಕೆಯಾಗಿ ಈಗ 6,500 ರೂ.ನಿಂದ 7,000 ರೂ.ವರೆಗೆ ಹರಾಜಾಗುತ್ತಿದೆ. ಇದನ್ನೂ ಓದಿ: ಡಬಲ್ ಮರ್ಡರ್, ಸೂಸೈಡ್ ಪ್ರಕರಣಕ್ಕೆ ಟ್ವಿಸ್ಟ್ – 1 ಕೋಟಿ ಜೀವನಾಂಶ ಕೇಳಿದ್ದಕ್ಕೆ ಬಿತ್ತು ಮೂರು ಹೆಣ
ನೀರಿನ ಕೊರತೆ:
ಕಳೆದ ಆರು ತಿಂಗಳಿಂದ ಮಳೆಯಿಲ್ಲದೆ ಹಾಗೂ ಕಬ್ಬಿಗೆ ನೀರಿನ ಪೂರೈಕೆಯಾಗದೆ ಗದ್ದೆಗಳು ಒಣಗಿ ನಿಂತಿವೆ. ಪರಿಣಾಮವಾಗಿ ಕಬ್ಬಿನ ಇಳುವರಿ ಅರ್ಧದಷ್ಟು ಕುಸಿದಿದೆ. ಗಾಣಗಳಿಗೆ ಕಬ್ಬು ಸಿಗದೆ ಉತ್ಪಾದನೆ ಸಂಪೂರ್ಣ ಕುಂಠಿತಗೊಂಡಿದೆ. ಹಿಂದೆ ಪ್ರತಿದಿನ 10 ರಿಂದ 12 ಲಾರಿಗಳಷ್ಟು ಮಾರುಕಟ್ಟೆಗೆ ಹೋಗುತ್ತಿದ್ದ ಬೆಲ್ಲದ ಪೂರೈಕೆ, ಈಗ ಅರ್ಧದಷ್ಟು ಇಳಿಕೆಯಾಗಿದೆ. ಇದನ್ನೂ ಓದಿ: 105 ವರ್ಷದ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ
ವ್ಯಾಪಾರಸ್ಥರ ಆಶ್ಚರ್ಯ:
ಬೆಲ್ಲದ ಮಾರುಕಟ್ಟೆ ಪ್ರಾರಂಭವಾದ ದಿನದಿಂದಲೂ ಈ ಮಟ್ಟಿಗೆ ದರ ಏರಿಕೆಯಾಗಿರಲಿಲ್ಲ. ಈ ಸೀಸನ್‌ನಲ್ಲಿ ಬೆಲೆ ತಗ್ಗಬೇಕಿತ್ತಾದರೂ, ಭಾರೀ ಏರಿಕೆ ಕಂಡಿರುವುದು ಇದೇ ಮೊದಲು ಎಂದು ವ್ಯಾಪಾರಸ್ಥರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಪಾತ್ರವಿಲ್ಲ – ಸಿಎಂ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಸಮರ್ಥನೆ
ಮಳೆಯಾಶ್ರಿತ ಹಾಗೂ ನೀರಾವರಿಯಿಲ್ಲದೆ ಒಣಗಿದ ಕಬ್ಬಿನ ಬೆಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದರೆ, ಕಚ್ಚಾ ವಸ್ತು ಸಿಗದೆ ಬೆಲ್ಲದ ದರ ಗಗನಕ್ಕೇರಿರುವುದು ಸಾಮಾನ್ಯ ಜನರಿಗೂ ಬಿಸಿ ತಟ್ಟುವಂತೆ ಮಾಡಿದೆ. ಇದನ್ನೂ ಓದಿ: ಬೆಂಗಳೂರು: 200 ರೂ. ಕೊಡ್ಲಿಲ್ಲ ಅಂತ ಮಂಗಳಮುಖಿ ಬರ್ಬರ ಹತ್ಯೆ – ಆರೋಪಿ ಅರೆಸ್ಟ್

