ಕಾಲಿವುಡ್ (Kollywood) ನಟಿ ಅಶು ರೆಡ್ಡಿ ( ಹೆಸರು ಡ್ರಗ್ಸ್ ಕೇಸ್ ಪ್ರಕರಣದಲ್ಲಿ ಕೇಳಿ ಬಂದಿತ್ತು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ಕಬಾಲಿ (Kabali) ಸಿನಿಮಾ ಖ್ಯಾತಿಯ ನಿರ್ಮಾಪಕ ಕೆ.ಪಿ ಚೌಧರಿ ಜೊತೆ ಅಶು ರೆಡ್ಡಿ ಸೇರಿದಂತೆ ಹಲವರು ನಿರಂತರ ಸಂಪರ್ಕದಲ್ಲಿದ್ದರು ಎನ್ನುವ ಮಾಹಿತಿಯನ್ನು ಪೊಲೀಸರು ಹೊರ ಹಾಕಿದ್ದರು. ಚೌಧರಿ ಜೊತೆ ಸಂಪರ್ಕದಲ್ಲಿರುವ ಫೋನ್ ನಂಬರ್ ಅನ್ನು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿ ಬಿಡುಗಡೆ ಮಾಡಿದ್ದರು. ಈ ವರದಿಯೇ ಅಶುಗೆ ಮುಳುವಾಗಿದೆ.
ಅಶು ರೆಡ್ಡಿ (Ashu Reddy)) ಫೋನ್ ನಂಬರ್ ಇರುವ ವರದಿಯನ್ನು ಬಿಡುಗಡೆ ಮಾಡಿದ್ದರಿಂದ ಅಶು ರೆಡ್ಡಿ ನಂಬರ್ ಎಲ್ಲ ಕಡೆ ಸಿಗುತ್ತಿದೆ. ಕೆಲವರು ಆ ವರದಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರಿಂದ ಅಶು ರೆಡ್ಡಿ ನಂಬರ್ ಬಹುತೇಕರಿಗೆ ಸಿಕ್ಕಿದೆ. ದಿನಕ್ಕೆ ಸಾವಿರಾರು ಕರೆಗಳನ್ನು ಅಶು ಸ್ವೀಕರಿಸುವಂತಾಗಿದೆ. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್
ಈ ಕುರಿತು ವಿಡಿಯೋ ಮಾಡಿರುವ ಅಶು ರೆಡ್ಡಿ, ಈ ಕೇಸಿಗೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಹೆಸರು ಮತ್ತು ಫೋನ್ ನಂಬರ್ ಅನ್ನು ರಿಲೀಸ್ (Number Leak) ಮಾಡಿದ್ದರಿಂದ ನನಗೆ ಸಾವಿರಾರು ಕರೆಗಳು ಬರುತ್ತಿವೆ. ಆತಂಕವಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ತಾವು ವಿದೇಶದಲ್ಲಿ ಇರುವುದಾಗಿಯೂ ತಿಳಿಸಿರುವ ಅವರು, ಬೇಕಾಬಿಟ್ಟಿ ತಮ್ಮ ಬಗ್ಗೆ ಸುದ್ದಿ ಮಾಡುತ್ತಿರುವವರ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.
ಅಶು ರೆಡ್ಡಿ ಇಷ್ಟು ದಿನ ಗ್ಲ್ಯಾಮರಸ್ ಫೋಟೋ ಮೂಲಕ ಗಮನ ಸೆಳೆಯುತ್ತಿದ್ದ ಅವರು ಈಗ ಡ್ರಗ್ ಕೇಸ್ ಮೂಲಕ ಸುದ್ದಿ ಆಗಿದ್ದಾರೆ. ರಜನಿಕಾಂತ್ ನಟನೆಯ ‘ಕಬಾಲಿ’ ಚಿತ್ರದ ನಿರ್ಮಾಪಕ ಕೆಪಿ ಚೌಧರಿ (KP Chaudhary) ಅವರು ಡ್ರಗ್ (Drugs) ಕೇಸ್‌ನಲ್ಲಿ ಅಂದರ್ ಆಗಿದ್ದಾರೆ. ಅಶು ರೆಡ್ಡಿ ಜೊತೆ ಅವರು ನೂರಾರು ಬಾರಿ ಫೋನ್ ಮೂಲಕ ಮಾತನಾಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ. ಡ್ರಗ್ ಮಾರಾಟ ಮಾಡುವ ವ್ಯಕ್ತಿಯ ಜೊತೆ ಇಷ್ಟೊಂದು ದೂರವಾಣಿ ಕರೆ ಏಕೆ ಎನ್ನುವ ಪ್ರಶ್ನೆ ಪೊಲೀಸರಲ್ಲಿ ಮೂಡಿದೆ.
ಅಶು ರೆಡ್ಡಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ತೆಲುಗಿನ ಬಿಗ್ ಬಾಸ್‌ನಲ್ಲಿ (Bigg Boss Telagu) ಗಮನ ಸೆಳೆದ ಅಶು ರೆಡ್ಡಿಗೆ ಟಿವಿ ಶೋ ಮೂಲಕ ಜನಪ್ರಿಯತೆ ಪಡೆದರು. ಈಗ ಅವರ ಹೆಸರು ಡ್ರಗ್ಸ್ ಕೇಸ್‌ನಲ್ಲಿ ಅವರ ಹೆಸರು ಕೇಳಿ ಬಂದಿದೆ. ಕಬಾಲಿ ನಿರ್ಮಾಪಕ ಅವರು ನೇರವಾಗಿ ಅಶು ರೆಡ್ಡಿ ಬಗ್ಗೆ ಆರೋಪ ಮಾಡಿಲ್ಲ. ಇವರ ಮಧ್ಯೆ ಲಿಂಕ್ ಇರೋದು ವಿಚಾರಣೆ ವೇಳೆ ಗೊತ್ತಾಗಿದೆ. ಅವರ ಬಳಿ ಇದ್ದ ಮೂರು ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಕೆಪಿ ಚೌಧರಿ ಅವರ ಒಂದು ಮೊಬೈಲ್‌ನಿಂದ ಅಶು ರೆಡ್ಡಿಗೆ ನೂರಾರು ಬಾರಿ ಫೋನ್ ಕಾಲ್ ಹೋಗಿದೆ. ಇದು ಏಕೆ ಎಂಬ ಪ್ರಶ್ನೆ ಮೂಡಿದೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]