ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೀಕೆಂಡ್ ಡ್ರಗ್ಸ್ ಪಾರ್ಟಿಗಳಿಗೆ ಎಷ್ಟೇ ಬಿಸಿ ಮುಟ್ಟಿಸಿದರೂ ನಿಂತಿಲ್ಲ. ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ ಹಲಸೂರು ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದರು.
ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು, ಬಾಲಿವುಡ್ ನಟ ಮಗ ಸೇರಿದಂತೆ, 50ಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್ಗೆ ಒಳಪಡಿಸಿದ್ದಾರೆ. ಅವರಲ್ಲಿ ಐವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದು, ಅರೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಡವರಿಗೆ ಸೂರು ಕಲ್ಪಿಸಲು 5 ಸಾವಿರ ಎಕರೆ ಸರ್ಕಾರಿ ಜಮೀನು ಮೀಸಲು: ಸಿಎಂ
ಮುಂಬೈ ಮೂಲದ ಡಿಜೆಯಿಂದ ಡ್ರಗ್ಸ್ ಸಪ್ಲೈ ಶಂಕೆ ವ್ಯಕ್ತವಾಗಿದೆ. ಈ ಡ್ರಗ್ಸ್ ಪಾರ್ಟಿಯಲ್ಲಿ ರಾಜ್ಯದ ಪ್ರಭಾವಿಗಳ ಮಕ್ಕಳು ಭಾಗಿಯಾಗಿದ್ದು, ಪೊಲೀಸ್ ರೇಡ್ಗೆ ಮುನ್ನವೇ ಅವರೆಲ್ಲಾ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ