ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ (Bengaluru) ಕೋಟ್ಯಾಂತರ ರೂಪಾಯಿ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಜೆಡಿಎಸ್ (JDS) ಕಿಡಿಕಾರಿದೆ.
ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್, ಗೃಹ ಸಚಿವ ಪರಮೇಶ್ವರ್ (G Parameshwar) ರಾಜೀನಾಮೆಗೆ ಆಗ್ರಹಿಸಿದೆ. ಕಾಂಗ್ರೆಸ್ ದುರಾಡಳಿತದಲ್ಲಿ ರಾಜ್ಯದ ಗುಪ್ತಚರ ಇಲಾಖೆ ಮತ್ತು ಪೊಲೀಸ್ ವ್ಯವಸ್ಥೆಯೇ ಬುಡಮೇಲಾಗಿದೆ. ಅಸಮರ್ಥ ಗೃಹ ಸಚಿವ ಪರಮೇಶ್ವರ್ ಮೊದಲು ರಾಜೀನಾಮೆ ಕೊಟ್ಟು, ಕರ್ನಾಟಕ ಪೊಲೀಸ್ ಇಲಾಖೆಯ ಮರ್ಯಾದೆ ಉಳಿಸಿ ಎಂದಿದೆ. ಇದನ್ನೂ ಓದಿ: ಮಹಾರಾಷ್ಟ್ರ ಪೊಲೀಸರಿಂದ ಬೆಂಗ್ಳೂರಲ್ಲಿ ಮಾದಕ ವಸ್ತು ಸೀಜ್ – ಸರ್ಕಾರದ ವಿರುದ್ಧ ಹೋರಾಟ: ನಿಖಿಲ್
ಎಕ್ಸ್‌ನಲ್ಲಿ ಏನಿದೆ?
ಕಾಂಗ್ರೆಸ್ ಸರ್ಕಾರದ ಅರಾಜಕತೆಯಿಂದ ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕ ಡ್ರಗ್ಸ್ ತವರೂರಾಗಿ ಬದಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ತಯಾರಿಕಾ ಘಟಕಗಳನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ವೈಫಲ್ಯವನ್ನು ಬೆತ್ತಲುಗೊಳಿಸಿದೆ.
ಮಹಾರಾಷ್ಟ್ರದ ಮಾದಕ ವಸ್ತು ನಿಗ್ರಹ ದಳ ಬೆಂಗಳೂರಿಗೆ ಬಂದು ಡ್ರಗ್ಸ್ ಫ್ಯಾಕ್ಟರಿ ಸೀಜ್ ಮಾಡಿದ್ದಾರೆ.
ಈ ಮಾಹಿತಿ ನಮ್ಮ ರಾಜ್ಯದ ಪೊಲೀಸರಿಗೆ ಯಾಕೆ ಸಿಕ್ಕಿಲ್ಲ ಮುಖ್ಯಮಂತ್ರಿಗಳೇ, ಗೃಹ ಸಚಿವರೇ ? ಈ ವೈಫಲ್ಯದ ಹೊಣೆಹೊತ್ತು @siddaramaiah ಹಾಗೂ @DrParameshwara ರಾಜೀನಾಮೆ ನೀಡಿ . @INCKarnataka#CongressFailsKarnataka… pic.twitter.com/ADWboWNMC7
— Janata Dal Secular (@JanataDal_S) December 29, 2025
ಜುಲೈ ತಿಂಗಳಲ್ಲಿ ಮುಂಬೈ ಪೊಲೀಸರು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಡ್ರಗ್ಸ್ ಫ್ಯಾಕ್ಟರಿ ಮೇಲೆ ದಾಳಿ ಮಾಡಿ, ಸುಮಾರು 390 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಪತ್ತೆ ಹಚ್ಚಿದ್ದರು. ಈಗ ಮತ್ತೆ ಮಹಾರಾಷ್ಟ್ರದ ಮಾದಕ ವಸ್ತು ನಿಗ್ರಹ ದಳ ಎಎನ್‌ಟಿಎಫ್ ಬೆಂಗಳೂರಿಗೆ ಬಂದು ದಾಳಿ ನಡೆಸಿ ಡ್ರಗ್ಸ್ ಫ್ಯಾಕ್ಟರಿ ಸೀಜ್ ಮಾಡಿದ್ದು, 55 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದರೇ, ಕಾಂಗ್ರೆಸ್ ದುರಾಡಳಿತದಲ್ಲಿ ರಾಜ್ಯದ ಗುಪ್ತಚರ ಇಲಾಖೆ ಮತ್ತು ಪೊಲೀಸ್ ವ್ಯವಸ್ಥೆಯೇ ಬುಡಮೇಲಾಗಿದೆ. ಅಸಮರ್ಥ ಗೃಹ ಸಚಿವ ಪರಮೇಶ್ವರ್ ಮೊದಲು ರಾಜೀನಾಮೆ ಕೊಟ್ಟು, ಕರ್ನಾಟಕ ಪೊಲೀಸ್ ಇಲಾಖೆಯ ಮರ್ಯಾದೆ ಉಳಿಸಿ ಎಂದಿದ್ದಾರೆ.ಇದನ್ನೂ ಓದಿ: ಉನ್ನಾವೋ ರೇಪ್ ಕೇಸ್ – ಸೆಂಗಾರ್ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ

