ಹಾಸನ: ಜಿಲ್ಲೆಗೆ (Hassan) ರೈಲುಗಳ (Train) ಮೂಲಕ ಮಾದಕ ವಸ್ತುಗಳು ಪೂರೈಕೆಯಾಗುತ್ತಿದೆ. ಹಳ್ಳಿ-ಹಳ್ಳಿಗಳಲ್ಲಿ ಯುವಕರಿಗೆ ಮಾದಕ ವಸ್ತು ಸಿಗುತ್ತಿದೆ. ರೈಲ್ವೆ ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ರೈಲ್ವೆ ಅಧಿಕಾರಿಗಳನ್ನು ಸಂಸದ ಶ್ರೇಯಸ್ ಪಟೇಲ್ (Shreyas Patel) ತರಾಟೆಗೆ ತೆಗೆದುಕೊಂಡಿದ್ದಾರೆ.
ಹಾಸನ ಜಿ.ಪಂ.ನ ಹೊಯ್ಸಳ ಸಭಾಂಗಣದಲ್ಲಿ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ನಡೆಸಿದರು. ಈ ವೇಳೆ ಆರಂಭದಲ್ಲಿ ಮಾದಕ ವಸ್ತುಗಳ ಬಗ್ಗೆ ಚರ್ಚೆ ಆರಂಭಿಸಿದರು. ರೈಲ್ವೇ ಪೊಲೀಸರು, ಪೊಲೀಸರ ಜೊತೆ ಸೇರಿ ಕೆಲಸ ಮಾಡಬೇಕು. ಮಾದಕ ವಸ್ತುಗಳ ಹಾವಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದಿದ್ದಾರೆ. ಇದನ್ನೂ ಓದಿ: ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ – ಬೆಂಬಲಿಗರಿಂದ ಸಂಭ್ರಮಾಚರಣೆ
ಯಾರ ಒತ್ತಡಕ್ಕೂ ಪೊಲೀಸರು ಮಣಿಯದೆ ಪೆಡ್ಲರ್‍ಗಳನ್ನು ಮೊದಲು ಬಂಧಿಸಬೇಕು. ಇದರ ಜೊತೆಗೆ ಮಟ್ಕಾ ದಂಧೆ ನಡೆಯುತ್ತಿದೆ. ಇದೆಲ್ಲದಕ್ಕೂ ಕಡಿವಾಣ ಹಾಕಲು ಪೊಲೀಸರಿಗೆ ಸೂಚನೆ ನೀಡಿ ಎಂದು ಎಸ್ಪಿ ಮಹಮದ್ ಸುಜೀತಾ ಅವರಿಗೆ ಸೂಚನೆ ನೀಡಿದರು.
ಮಾದಕ ವಸ್ತುಗಳನ್ನು ಸೇವಿಸಿ ಪುಂಡರು ವಿದ್ಯಾರ್ಥಿನಿಯರಿಗೆ ತೊಂದರೆ ಕೊಡುತ್ತಿದ್ದಾರೆ. ಕಾಲೇಜುಗಳು ಬಿಡುವ ವೇಳೆ ಪೊಲೀಸ್ ಬೀಟ್ ಹಾಕಬೇಕು. ಬೆಳಿಗ್ಗೆ ಹಾಗೂ ಸಂಜೆ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಬೀಟ್ ಹೆಚ್ಚಿಸಿ ಎಂದು ಅವರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ