Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಥೈಲ್ಯಾಂಡ್‌ನಿಂದ ಫ್ಲೈಟ್‌ನಲ್ಲಿ ಬೆಂಗಳೂರಿಗೆ ಡ್ರಗ್ಸ್‌ ಸಪ್ಲೈ – 10 ಮಂದಿ ಕೇರಳ ಗ್ಯಾಂಗ್ ಬಂಧಿಸಿದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಥೈಲ್ಯಾಂಡ್‌ನಿಂದ ಫ್ಲೈಟ್‌ನಲ್ಲಿ ಬೆಂಗಳೂರಿಗೆ ಡ್ರಗ್ಸ್‌ ಸಪ್ಲೈ – 10 ಮಂದಿ ಕೇರಳ ಗ್ಯಾಂಗ್ ಬಂಧಿಸಿದ ಪೊಲೀಸರು

Bengaluru City

ಥೈಲ್ಯಾಂಡ್‌ನಿಂದ ಫ್ಲೈಟ್‌ನಲ್ಲಿ ಬೆಂಗಳೂರಿಗೆ ಡ್ರಗ್ಸ್‌ ಸಪ್ಲೈ – 10 ಮಂದಿ ಕೇರಳ ಗ್ಯಾಂಗ್ ಬಂಧಿಸಿದ ಪೊಲೀಸರು

Public TV
Last updated: January 28, 2026 3:37 pm
Public TV
Share
2 Min Read
drug peddlers bengaluru
SHARE

ಬೆಂಗಳೂರು: ಥೈಲ್ಯಾಂಡ್‌ನಿಂದ (Thailand) ಬೆಂಗಳೂರಿಗೆ (Bengaluru) ಡ್ರಗ್ಸ್‌ ಸಪ್ಲೈ ಮಾಡುತ್ತಿದ್ದ ಕೇರಳ ಡ್ರಗ್ ಪೆಡ್ಲರ್‌ಗಳನ್ನು (Drug Peddlers) ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬೃಹತ್ ಡ್ರಗ್ಸ್‌ ಜಾಲವೊಂದನ್ನು ಭೇದಿಸಿದ್ದು, ಹತ್ತು ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು, ಡಾರ್ಕ್‌ವೆಬ್ ಬಳಸಿ ಬೆಂಗಳೂರಿನಾದ್ಯಂತ ಮಾರಾಟ ಮಾಡಲಾಗುತ್ತಿತ್ತು. ಇದನ್ನೂ ಓದಿ: ಕಾರವಾರ| ಯಾರೂ ಇಲ್ಲದ ವೇಳೆ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿ

ಬಂಧಿತ ಆರೋಪಿಗಳನ್ನು ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್, ನಿಸಾರ್ ಮತ್ತು ಅಭಿನವ್ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಕರ್ನಾಟಕ ಮೂಲದವರಾಗಿದ್ದು, ಉಳಿದ ಎಂಟು ಮಂದಿ ಕೇರಳ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ಆರೋಪಿಗಳು ಡಾರ್ಕ್‌ವೆಬ್‌ನಲ್ಲಿ ‘ಟೀಂ ಕಲ್ಕಿ’ (Team Kalki) ಎಂಬ ವೆಬ್‌ಸೈಟ್ ಮೂಲಕ ಡ್ರಗ್ಸ್‌ಗಾಗಿ ಆರ್ಡರ್ ಮಾಡುತ್ತಿದ್ದರು. ಥೈಲ್ಯಾಂಡ್‌ನಲ್ಲಿರುವ ಕೇರಳ ಮೂಲದ ವ್ಯಕ್ತಿಯೊಬ್ಬ ವಿಮಾನದ ಮೂಲಕ ಬೆಂಗಳೂರಿಗೆ ಡ್ರಗ್ಸ್ ಕಳುಹಿಸುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಬೆಂಗಳೂರಿಗೆ ತಲುಪಿದ ನಂತರ, ಆರೋಪಿಗಳು ನಗರದಾದ್ಯಂತ ಡ್ರಗ್ಸ್ ವಿತರಿಸುತ್ತಿದ್ದರು. ಯಲಹಂಕ, ಹೆಬ್ಬಾಳ, ಕೋರಮಂಗಲ, ಬೆಳ್ಳಂದೂರು ಸೇರಿದಂತೆ ವಿವಿಧ ಪ್ರದೇಶಗಳನ್ನು ಹಂಚಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳು ಮತ್ತು ಪಾರ್ಟಿಗಳಿಗೆ ಬರುವವರೇ ಇವರ ಪ್ರಮುಖ ಗಿರಾಕಿಗಳಾಗಿದ್ದರು. ಈ ಡ್ರಗ್ ಪೆಡ್ಲರ್‌ಗಳು ಒಂದೇ ತಂಡದ ಭಾಗವಾಗಿದ್ದರೂ, ತಾವು ಹಂಚಿಕೊಂಡಿದ್ದ ಪ್ರದೇಶಗಳ ವಿಚಾರದಲ್ಲಿ ಆಗಾಗ ಜಗಳವಾಡುತ್ತಿದ್ದರು. ತಮ್ಮ ವ್ಯಾಪ್ತಿಯನ್ನು ಬಿಟ್ಟು ಬೇರೆ ಪ್ರದೇಶದಲ್ಲಿ ಡ್ರಗ್ಸ್ ಮಾರಾಟಕ್ಕೆ ಹೋದ ಪೆಡ್ಲರ್‌ನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಕೂಡ ನಡೆಸಿದ್ದರು. ಕೆಲವೊಮ್ಮೆ ಕೊಲೆ ಮಾಡುವ ಹಂತದವರೆಗೆ ಅವರ ಜಗಳ ತಲುಪಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಧಗಧಗನೇ ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್

ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 500 ಎಲ್‌ಎಸ್‌ಡಿ ಸ್ಟ್ರಿಪ್ಸ್, 10 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಎರಡು ಕಾರುಗಳು ಮತ್ತು 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಮುಖ್ಯ ಆರೋಪಿ ನಾಪತ್ತೆಯಾಗಿದ್ದು, ಅಮೃತಹಳ್ಳಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಇನ್ನು ತಲಘಟ್ಟಪುರ ಪೊಲೀಸರು ಕಾರ್ಯಾಚರಣೆ ನಡೆಸಿ 60 ಲಕ್ಷ ಮೌಲ್ಯದ 78 ಕೆಜೆ ಗಾಂಜಾ ಸೀಜ್ ಮಾಡಿದ್ದಾರೆ.

TAGGED:drugKerala Gangthailandಕೇರಳ ಗ್ಯಾಂಗ್ಡ್ರಗ್ಥೈಲ್ಯಾಂಡ್
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

T20 World Cup Australia out Zimbabwe reach Super 8 stage after Pallekele washout
Cricket

ಟಿ-20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ – ಸೂಪರ್‌-8ಕ್ಕೆ ಜಿಂಬಾಬ್ವೆ ಜಿಗಿತ

Public TV
By Public TV
2 minutes ago
Pushpa Arunkumar
Districts

ಹಾಸನ | ಸೈಟ್ ಜಟಾಪಟಿ – ಎಸ್ಪಿಗೆ ದೂರು ನೀಡಿದ ಯಶ್ ತಾಯಿ

Public TV
By Public TV
4 minutes ago
DK Suresh
Bengaluru City

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಸರಿ ಇಲ್ಲ, ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ: ಡಿಕೆಸು

Public TV
By Public TV
38 minutes ago
DK Shivakumar and delegation
Bengaluru City

ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ

Public TV
By Public TV
52 minutes ago
Suryakumar Yadav
Cricket

ಭಾರತ – ಪಾಕಿಸ್ತಾನ ಮಧ್ಯೆ ಮತ್ತೆ ಅಮೆರಿಕ!

Public TV
By Public TV
1 hour ago
PHAKEERA ARREST
Crime

ದಾವಣಗೆರೆ | 28 ವರ್ಷದ ಹಿಂದೆ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?