Bengaluru CityBollywoodCinemaCrimeDistrictsKarnatakaLatestMain Post

ಡ್ರಗ್ಸ್ ಕೇಸ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ, ನಟ ಸಿದ್ಧಾಂತ್ ಕಪೂರ್ ಬಂಧನ

ಬೆಂಗಳೂರು: ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.

ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್‍ನಲ್ಲಿ ಪ್ರತಿಷ್ಠಿತ 5 ಸ್ಟಾರ್ ದಿ ಪಾರ್ಕ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ಮಾಡಿದ್ದಾರೆ. ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿ ಸೇರಿ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದರು. ಈ ಗುಂಪಿನಲ್ಲಿದ್ದ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಮಾದಕವಸ್ತು ಸೇವನೆ ಮಾಡಿರೋದು ದೃಢವಾಗಿದೆ. ಈ ಗುಂಪಿನಲ್ಲಿ ಸಿದ್ಧಾಂತ್ ಕಪೂರ್ ಸಹ ಇರುವುದು ಖಚಿತವಾಗಿದೆ. ಈ ಪರಿಣಾಮ ಸಿದ್ಧಾಂತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭರ್ಜರಿ ಡ್ರಗ್ಸ್ ಪಾರ್ಟಿ – ಬಾಲಿವುಡ್ ನಟನ ಪುತ್ರ ಸೇರಿ 50ಕ್ಕೂ ಹೆಚ್ಚು ಮಂದಿ ವಶ

ಸಿದ್ಧಾಂತ್  ಹೋಟೆಲ್‍ನಲ್ಲಿ ಡಿಜೆ ಪ್ಲೈಯರ್ ಆಗಿದ್ದು, ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿದೆ. ಸಿದ್ಧಾಂತ್ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಮಗ ಆಗಿದ್ದು, ಶ್ರದ್ಧಾ ಕಪೂರ್ ಸಹೋದರ ಆಗಿದ್ದಾರೆ.

ಅಖೀಲ್ ಸೋನಿ, ಅಜೋದ್ ಸಿಂಗ್ ಪಂಜಾಬ್, ಅಖೀಲ್, ಅನಿ, ದರ್ಶನ್ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳೇಲ್ಲರು ಟೆಕ್ಕಿಗಳಾಗಿದ್ದು, ರಾತ್ರಿ ಪಾರ್ಟಿ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ ಕೊಟ್ಟಿದ್ದಾರೆ.

Leave a Reply

Your email address will not be published.

Back to top button