ಉಡುಪಿ: ಮಾದಕ ವ್ಯಸನ ಪ್ರಕರಣದಲ್ಲಿ ಭಾಗಿಯಾಗಿದ್ದ 42 ವಿದ್ಯಾರ್ಥಿಗಳನ್ನು ಮಣಿಪಾಲ ವಿಶ್ವವಿದ್ಯಾನಿಲಯವು (Manipal Academy of Higher Education (MAHE) ಅಮಾನತುಗೊಳಿಸಿದೆ.
ವಿಶ್ವವಿದ್ಯಾಲಯ ಹಾಗೂ ಪೊಲೀಸರು (Manipal Police) ನಡೆಸಿದ ಆಂತರಿಕ ತನಿಖೆಯಲ್ಲಿ ದೃಢಪಟ್ಟನಂತರ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಮಟ್ಟಿಗೆ ಅಮಾನತುಗೊಳಿಸಿ ವಿವಿ ಆದೇಶಿಸಿದೆ. ಭವಿಷ್ಯದ ದೃಷ್ಟಿಯಿಂದ ಈ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಆರೋಗ್ಯಕರ ವಾತಾವರಣ ಸೃಷ್ಟಿಸಲು ಬದ್ಧರಾಗಿರುವುದಾಗಿ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಸಸಿ ನೆಟ್ಟು ಹುಟ್ಟುಹಬ್ಬ ಆಚರಿಸಿದ ‘ರಾಮ ರಾಮ ರೇ’ ಖ್ಯಾತಿಯ ನಟರಾಜ್
Advertisement
Advertisement
ಈ ಹಿಂದೆ ಮಂಗಳೂರಿನಲ್ಲಿ (Mangaluru) ವೈದ್ಯರ ಡ್ರಗ್ಸ್ ಪ್ರಕರಣ ಭಾರೀ ಸುದ್ದಿಯಾಗಿತ್ತು. ಎಡಿಜಿಪಿ ಅಲೋಕ್ ಕುಮಾರ್ (Alok Kumar) ಡ್ರಗ್ಸ್ ದಂಧೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದೀಗ ಮಣಿಪಾಲ ವಿವಿ ಕಟ್ಟುನಿಟ್ಟಿನ ನಿರ್ಧಾರ ಕೈಗೊಂಡಿದ್ದು, ಒಂದು ತಿಂಗಳ ಕಾಲ ವಿದ್ಯಾರ್ಥಿಗಳನ್ನ ಅಮಾನತುಗೊಳಿಸಿದೆ. ಇದನ್ನೂ ಓದಿ: 1,000 ರೂ.ಗಾಗಿ ವೃದ್ಧನ ಕರುಳು ಹೊರಗೆ ಬರುವಂತೆ ಚಾಕುವಿನಿಂದ ಇರಿದ್ರು!
Advertisement
Advertisement
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚೀಂದ್ರ ಮಾತನಾಡಿದ್ದು, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಾವು ಹಲವಾರು ಡ್ರಗ್ಸ್ ಪ್ರಕರಣಗಳನ್ನು ಪತ್ತೆ ಮಾಡಿದ್ದೇವೆ. ಈ ಕಾರ್ಯಾಚರಣೆಯಲ್ಲಿ ಅನೇಕ ಮಂದಿ ಪೆಡ್ಲರ್ ಗಳನ್ನ ವಶಕ್ಕೆ ತೆಗೆದುಕೊಂಡಿದ್ದೇವೆ. ಪೆಡ್ಲರ್‌ಗಳ ಮೂಲಕ ಗ್ರಾಹಕರು ಯಾರೂ ಅನ್ನೋದು ಪತ್ತೆಯಾಗಿದೆ. ಮಣಿಪಾಲ ವಿವಿಯ ಕೆಲ ವಿದ್ಯಾರ್ಥಿಗಳು ಕೂಡಾ ಪೆಡ್ಲರ್‌ಗಳಾಗಿದ್ದಾರೆ ಎಂಬುದೂ ತನಿಖೆಯಲ್ಲಿ ತಿಳಿದುಬಂದಿದೆ. ಹೆಚ್ಚಿನ ಪ್ರಮಾಣದ ಮಾದಕ ದ್ರವ್ಯಗಳು ಪತ್ತೆಯಾಗಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ನಾವು ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡಿದ್ದೆವು. ಕಾಲೇಜು ಮತ್ತು ಹಾಸ್ಟೆಲ್ ಆವರಣದಲ್ಲಿ ಡ್ರಗ್ಸ್ ವ್ಯವಹಾರ ನಡೆದ ಬಗ್ಗೆ ವಿದ್ಯಾರ್ಥಿಗಳನ್ನು ಗುರುತಿಸಿ ಪಟ್ಟಿ ನೀಡಿದ್ದೆವು. ಇದಕ್ಕೆ ಮಣಿಪಾಲ ವಿವಿ ಸಕಾರಾತ್ಮಕವಾಗಿ ಸ್ಪಂದಿಸಿ ಕ್ರಮ ಕೈಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k