ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ 8 ಜನರನ್ನು ವಶಕ್ಕೆ ಪಡೆದಿದ್ದೇವೆ ಎಂದು ಎನ್‍ಸಿಬಿ ಮುಖ್ಯಸ್ಥ ಎಸ್.ಎನ್.ಪ್ರಧಾನ್ ಸ್ಪಷ್ಟಪಡಿಸಿದ್ದಾರೆ.
Advertisement
ಈ ಕುರಿತು ಮಾಹಿತಿ ನೀಡಿರುವ ಅವರು, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದರಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಅರ್ಯನ್ ಖಾನ್ ಸಹ ಒಬ್ಬ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಪ್ರಯಾಣಿಕರ ಸೋಗಿನಲ್ಲಿ ಟಿಕೆಟ್ ಬುಕ್, ಎನ್‍ಸಿಬಿ ರೋಚಕ ಕಾರ್ಯಾಚರಣೆ
Advertisement
Eight people have been detained for questioning (in connection with the seizure of drugs from a party at a cruise off Mumbai coast). On the basis of the information that we would receive from them, further raids will be conducted: NCB chief SN Pradhan to ANI pic.twitter.com/wnnCgrMhVK
— ANI (@ANI) October 3, 2021
Advertisement
ಸಮುದ್ರದಲ್ಲಿ ಹಡಗಿನಲ್ಲಿ ತೇಲುತ್ತ ಬಾಲಿವುಡ್ ನಟರು, ಉದ್ಯಮಿಗಳ ಮಕ್ಕಳು ಡ್ರಗ್ಸ್ ಪಾರ್ಟಿ ಮಾಡಿದ್ದರು. ಐಷಾರಾಮಿ ಹಡಗಿನಲ್ಲಿ ಎನ್‍ಸಿಬಿ ಕಾರ್ಯಾಚರಣೆಯೇ ರೋಚಕವಾಗಿತ್ತು. ಎನ್‍ಸಿಬಿ ಸಮೀರ್ ವಾಂಖೆಡೆ ಟೀಮ್ ಮಾರುವೇಷದಲ್ಲಿ ಹಡಗಿನಲ್ಲಿ ಪ್ರಯಾಣಿಸಿ ಆಪರೇಷನ್ ನಡೆಸಿತ್ತು. ಕಾರ್ಯಾಚರಣೆಯಲ್ಲಿ ಯಶಸ್ವಿ ಸಹ ಆಗಿದ್ದು, ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಸೇರಿದಂತೆ ಹಲವು ಪ್ರತಿಷ್ಟಿತರ ಮಕ್ಕಳನ್ನು ವಶಕ್ಕೆ ಪಡೆದಿತ್ತು. ಇದನ್ನೂ ಓದಿ: ಹೈ ಪ್ರೊಫೈಲ್ ಡ್ರಗ್ಸ್ ಕೇಸ್- ಶಾರುಖ್ ಖಾನ್ ಪುತ್ರನಿಗೆ ಬಂಧನ ಭೀತಿ
Advertisement
We were gathering inputs and took the action when inputs suggested that drugs like charas & MDM were carried for consumption at the party: NCB chief SN Pradhan on the seizure of drugs from a party at a cruise off Mumbai coast yesterday pic.twitter.com/ItJ5kiLacF
— ANI (@ANI) October 3, 2021
ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಐಷಾರಾಮಿ ಹಡಗಿನಲ್ಲಿ ಸಮುದ್ರದ ಮಧ್ಯದಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಎನ್‍ಸಿಬಿ ಅಧಿಕಾರಿಗಳು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕೊಕೇನ್, ಎನ್‍ಡಿಎಂ, ಹಾಶಿಶ್ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆಯಲಾಗಿದೆ.
We are acting in an impartial manner. In the process, if some connections to Bollywood or rich people emerge, so be it. We have to act within the purview of the law: NCB chief SN Pradhan on the seizure of drugs from a party at a cruise off Mumbai coast pic.twitter.com/yheTlGbBpY
— ANI (@ANI) October 3, 2021