ಬೆಂಗಳೂರು: ಸಿಲಿಕಾನ್ ಸಿಟಿಗೆ ಅಂಟಿರೊ ಡ್ರಗ್ಸ್ ಪೆಡಂಭೂತ ಹೋಗುವ ಯಾವ ಲಕ್ಷಣವೂ ಕಂಡು ಬರ್ತಿಲ್ಲ. ಹೊಸ ವರ್ಷಕ್ಕಾಗಿ ಪಾರ್ಟಿಪ್ರಿಯರನ್ನ ಟಾರ್ಗೆಟ್ ಮಾಡಿ ತರಲಾಗಿದ್ದ 18 ಕೋಟಿ ಮೌಲ್ಯದ ಮಾದಕವಸ್ತು (Drugs) ಜಪ್ತಿ ಮಾಡಿರುವ ಸ್ಟೋರಿ ಇದೆ ನೋಡಿ…
ಭರ್ಜರಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು (Bengaluru Police) 18.75 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ (Hydro Ganja), ಸಾಮಾನ್ಯ ಗಾಂಜಾ ಮತ್ತು ಎಂಡಿಎಂಎ ಸೇರಿದಂತೆ ವಿವಿಧ ಮಾದಕವಸ್ತುಗಳನ್ನ ಜಪ್ತಿ ಮಾಡಿದ್ದಾರೆ. ಈ ಸಂಬಂಧ 10 ಮಂದಿ ಆರೋಪಿಗಳನ್ನ ಬಂಧಿಸಲಾಗಿದ್ದು, ಐದು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಲಿವ್ ಇನ್ ಗೆಳತಿ ಖರ್ಚು ನಿಭಾಯಿಸಲು ಕಳ್ಳತನಕ್ಕಿಳಿದಿದ್ದ ರೋಮಿಯೋ ಸೇರಿ ಇಬ್ಬರು ಅರೆಸ್ಟ್

ಬ್ಯಾಂಕಾಕ್‌ನಿಂದ ಹೈಡ್ರೋಗಾಂಜಾ ಸಾಗಾಟ
ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 18 ಕೆ.ಜಿ. 590 ಗ್ರಾಂ ಹೈಡ್ರೋಗಾಂಜಾವನ್ನ ಜಪ್ತಿ ಮಾಡಿದ್ದು, ಇದರ ಮೌಲ್ಯ 18.60 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಬ್ಯಾಂಕಾಕ್‌ನಿಂದ ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಲಾಗಿದ್ದ ಈ ಹೈಡ್ರೋಗಾಂಜಾವನ್ನ ಏರ್‌ಪೋರ್ಟ್‌ನಿಂದ ಹೊರಬರುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸೇರಿದಂತೆ ಕೊರಿಯರ್ ಮಾಡ್ತಿದ್ದ ಇಬ್ಬರನ್ನೂ ಬಂಧಿಸಲಾಗಿದೆ. ತನಿಖೆ ವೇಳೆ ಇವರು ಮಾದಕವಸ್ತು ವಾಹಕರು ಎಂದು ತಿಳಿದುಬಂದಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ರಕ್ತಚಂದನ ಸಾಗಿಸ್ತಿದ್ದ ನಾಲ್ವರು ಅರೆಸ್ಟ್ – ಪ್ರತ್ಯೇಕ ಕಡೆ 1.75 ಕೋಟಿ ಮೌಲ್ಯದ 1,889 ಕೆ.ಜಿ ಜಪ್ತಿ
ತ್ರಿಪುರಾದಿಂದ ತಂದು ಬೆಂಗಳೂರಲ್ಲಿ ಗಾಂಜಾ ಮಾರಾಟ
ಆರ್‌ಎಂಸಿ ಯಾರ್ಡ್ ಪೊಲೀಸರು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ, ಬ್ಯಾಗ್‌ನಲ್ಲಿ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನ ಬಂಧಿಸಿದ್ದಾರೆ. ಆತನಿಂದ 8 ಕೆ.ಜಿ. 350 ಗ್ರಾಂ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ 8.35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರ್‌ಟಿ ನಗರ ಪೊಲೀಸರು ಮೈದಾನವೊಂದರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ದಾಳಿ ನಡೆಸಿ ಬಂಧಿತರಿಂದ 5 ಕೆ.ಜಿ. 437 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದ್ದು, ಇದರ ಮೌಲ್ಯ 5.43 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಆರೋಪಿಗಳು ತ್ರಿಪುರ ರಾಜ್ಯದಿಂದ ಗಾಂಜಾವನ್ನು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜೆ.ಸಿ ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ವಿದೇಶಿ ಪ್ರಜೆಯನ್ನ ಬಂಧಿಸಿ, ಆತನಿಂದ 21 ಗ್ರಾಂ ಎಂಡಿಎಂಎ (MDMA) ಮಾದಕವಸ್ತುವನ್ನ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 1.35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯಿಂದ ಒಂದು ಮೊಬೈಲ್ ಮತ್ತು 1,500 ರೂ. ನಗದನ್ನು ಕೂಡ ಜಪ್ತಿ ಮಾಡಲಾಗಿದೆ. ಅದೇ ರೀತಿ ಮಲ್ಲೇಶ್ವರಂ ಪೊಲೀಸರು ಓರ್ವ ವ್ಯಕ್ತಿಯನ್ನ ಬಂಧಿಸಿ, ಆತನಿಂದ 772 ಗ್ರಾಂ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ. ಪೊಲೀಸರ ಅವಿರತ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಗೆ ಹ್ಯಾಟ್ಸಾಫ್ ಹೇಳಲೇಬೇಕು. ಇದನ್ನೂ ಓದಿ: Uttar Pradesh | ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ – ನಾಲ್ವರು MBBS ವಿದ್ಯಾರ್ಥಿಗಳು ಸಾವು

