ಗದಗ: ಸಿದ್ದರಾಮಯ್ಯ (Siddaramaiah) ಅವಧಿಯಲ್ಲಿ ಮರಳಿನ ಮಾಫಿಯಾ (Sand Mafia) ಹಾಗೂ ಡ್ರಗ್ಸ್ ಮಾಫಿಯಾ (Drugs Mafia) ಬಲವಾಗಿತ್ತು. ಶಾಲಾ ಕಾಲೇಜುಗಳಲ್ಲಿ ಕೂಡಾ ಡ್ರಗ್ಸ್ ಸಿಗುತ್ತಿತ್ತು. ಅದಕ್ಕೆ ಪುಷ್ಠಿ ನೀಡಿದ್ದು ಸಿದ್ದರಾಮಯ್ಯ. ಅದೇ ಹಣದಲ್ಲಿ ರಾಜಕಾರಣ ಮಾಡುತ್ತಿದ್ದರು. ಬಿಜೆಪಿ (BJP) ಅಧಿಕಾರಕ್ಕೆ ಬಂದ ಮೇಲೆ ಇವೆಲ್ಲವನ್ನೂ ಮಟ್ಟಹಾಕಲಾಗಿದೆ ಎಂದು ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದರು.
ಜಿಲ್ಲೆಯ ಗಜೇಂದ್ರಗಡ ನಗರದಲ್ಲಿ ಬಿಜೆಪಿ ಪದಾಧಿಕಾರಿಗಳ ಸಂಕಲ್ಪ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕಟೀಲ್, ಆಗ ಶಾಲಾ ಕಾಲೇಜುಗಳಲ್ಲಿ ಕೂಡಾ ಡ್ರಗ್ಸ್ ಸಿಗುತ್ತಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಮಟ್ಟಹಾಕಲಾಗಿದೆ. ಈ ವಿಷಯದಲ್ಲಿ ಚಲನಚಿತ್ರ ನಟ-ನಟಿಯರು, ರಾಜಕಾರಣಿಗಳನ್ನು ಕೂಡಾ ನಾವು ಬಿಟ್ಟಿಲ್ಲ ಎಂದರು.
Advertisement
Advertisement
ಭ್ರಷ್ಟಾಚಾರ, ಭಯೋತ್ಪಾದನೆ, ಪರಿವಾರವಾದ ಕಾಂಗ್ರೆಸ್‌ನ ಮುಖವಾಡ. ಅರ್ಕಾವತಿ ಡಿ- ನೋಟಿಫಿಕೆಷನ್ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲು ಸೇರುತ್ತಾರೆ. ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಹೋಗಿದೆ. ಅವರು ಜೈಲಿಗೆ ಹೋಗಲೇ ಬೇಕು ಎಂದು ಕಿಡಿಕಾರಿದರು.
Advertisement
ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿಕೆಶಿ ನಂತರ ಈಗ ಮಲ್ಲಿಕಾರ್ಜುನ ಖರ್ಗೆಯವರ 3ನೇ ಶಕ್ತಿ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷರ ನಂತರ ಅವರದೊಂದು ಬಣ ಹುಟ್ಟಿಕೊಳ್ಳುತ್ತದೆ. ಈ ಮೂಲಕ 3ನೇ ಟೀಮ್ ಶುರುವಾಗಲಿದೆ. ಸಿದ್ದರಾಮಯ್ಯ ಸಿಎಂ ಸ್ಥಾನದ ಬಗ್ಗೆ ತಿರುಕನ ಕನಸು ಕಾಣುತ್ತಿದ್ದಾರೆ. ಖರ್ಗೆ ಸಿಎಂ ಆಗುವುದನ್ನು ತಪ್ಪಿಸಿದವರು ಸಿದ್ದರಾಮಯ್ಯ. ಈಗ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಆಗುತ್ತಿರುವುದಕ್ಕೆ ಸಿದ್ದರಾಮಯ್ಯನವರಿಗೆ ಭಯ ಶುರುವಾಗಿದೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು ದಾಖಲು
Advertisement
ಸಿದ್ದರಾಮಯ್ಯ ಖರ್ಗೆಯವರಿಗೆ ದೋಖಾ ಹೊಡೆದವರು. ಸಿಎಂ ಸ್ಥಾನಕ್ಕೆ ಏರಲಿಕ್ಕೆ ಬಿಡದವರು. ದಲಿತ ಮುಖ್ಯಮಂತ್ರಿ ಆಗಲು ಅಡ್ಡ ಹಾಕಿದವರು. ಖರ್ಗೆಯನ್ನು ಸೋಲಿಸಲು ಒಳ ಒಪ್ಪಂದ ಮಾಡಿಕೊಂಡು ರಾಜಕಾರಣ ಮಾಡಿದವರು. ಖರ್ಗೆ ಅಧ್ಯಕ್ಷ ಆದಮೇಲೆ ಸಿದ್ದರಾಮಯ್ಯ ಅವರಿಗೆ ಸೀಟ್ ಸಿಗುವುದಿಲ್ಲ ನೋಡುತ್ತಿರಿ ಎಂದರು. ಇದನ್ನೂ ಓದಿ: ಯಡಿಯೂರಪ್ಪನವ್ರ ಬಚ್ಚಾ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವುದು ಇದು ಕಾಂಗ್ರೆಸ್ ಜೋಡೋ ಯಾತ್ರೆ ಅಲ್ಲ. ಸಿದ್ದರಾಮಯ್ಯ, ಡಿಕೆಶಿ ಕ್ಷೇತ್ರ ಹುಡುಕುವ ಯಾತ್ರೆ. ಡಿಕೆ ಉಲ್ಟಾ ಓದಿದ್ರೆ ಕೆಡಿ ಆಗುತ್ತೆ. ಓರ್ವ ಕೆಡಿ ಮತ್ತೋರ್ವ ಹೇಡಿ ಅಂತ ಸಂಬೋಧಿಸಿದರು.