ಗುವಾಹಟಿ: ಅಸ್ಸಾಂ ಪೊಲೀಸರು (Assam Police) ನಡೆಸಿದ ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆಯಲ್ಲಿ 45 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಖಚಿತ ಮಾಹಿತಿಯ ಮೇರೆಗೆ ಕಚಾರ್ (Cachar) ಜಿಲ್ಲೆಯ ಎರಡು ಕಡೆ ದಾಳಿ ನಡೆಸಿ 45 ಕೋಟಿ ಮೌಲ್ಯದ 1.5 ಲಕ್ಷ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ದೆಹಲಿಯ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – ಪಾರಾಗಲು ಮಹಡಿಯಿಂದ ಹಾರಿದ ಜನ
ಮಾದಕವಸ್ತು ವ್ಯಾಪಾರವು ಯುವಜನರು ಮತ್ತು ಸಮುದಾಯದ ಸುರಕ್ಷತೆಗೆ ಗಂಭೀರ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ನಮ್ಮ ಯುವಕರನ್ನು ರಕ್ಷಿಸುವಲ್ಲಿ ಅಸ್ಸಾಂ ಪೊಲೀಸರು ದೃಢವಾಗಿ ನಿಂತಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಇದನ್ನೂ ಓದಿ: ನಾಳೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ